ಬೆಂಗಳೂರು :
ಜೆಡಿಎಸ್ ನ ವರಿಷ್ಠ ಹೆಚ್.ಡಿ.ದೇವೆಗೌಡರ ಕುಟುಂಬ ರಾಜಕೀಯದ ವಿರುದ್ಧಮಾಜಿ ಸಚಿವ ಬಾಬುರಾವ್ ಚಿಂಚನಸೂರು ವ್ಯಂಗ್ಯವಾಡಿದ್ದಾರೆ.
ಕಲಬುರಗಿಯಲ್ಲಿ ನಡೆದ ಕೋಲಿ ಸಮಾಜ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರಿಗೆ 224 ಮೊಮ್ಮಕ್ಕಳಿದ್ದಿದ್ದರೆ ಎಲ್ಲ ಕ್ಷೇತ್ರಗಳಲ್ಲಿ ಅವರೇ ಸ್ಪರ್ಧೆ ಮಾಡುತ್ತಿದ್ದರು. ಆದ್ರೆ ಅಷ್ಟು ಮಂದಿ ಯಾಕೆ ಮೊಮ್ಮಕ್ಕಳಿಲ್ಲ ಅಂತ ಅವರು ಚಿಂತೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಹಾಗೇ ಕಲಬುರಗಿಯಲ್ಲಿಯೂ ತಂದೆ, ಮಗ ಅಷ್ಟೇ ಇರಬೇಕು ಅಂತಾ ಎಲ್ಲರನ್ನೂ ಹೊರಗೆ ಹೋಗೋ ಹಾಗೇ ಮಾಡಿದ್ದಾರೆ ಅಂತ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಬಾಬುರಾವ್ ಚಿಂಚನಸೂರು ವಾಗ್ದಾಳಿ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ