ತುಮಕೂರು:
ಹಾಸನ ಜಿಲ್ಲೆ ಚನ್ನರಾಯಪಟ್ಟಣ ವಕೀಲರಾದ ಸತೀಶ್ ಎಂಬುವರನ್ನು ಮಾ.27 ರಂದು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ತುಮಕೂರು ಜಿಲ್ಲಾ ವಕೀಲರ ಸಂಘದಿಂದ ನ್ಯಾಯಾಲಯ ಕಲಾಪಗಳನ್ನು ಬಹಿಷ್ಕರಿಸಲಾಯಿತು.
ಚನ್ನರಾಯಪಟ್ಟಣದ ವಕೀಲರಾದ ಸತೀಶ್ ಅವರನ್ನು ತನ್ನ ಸ್ವಗ್ರಾಮ ನಾಗರಘಟ್ಟದಲ್ಲಿ ರಾತ್ರಿ 9 ಗಂಟೆ ಸಮಯಕ್ಕೆ ದುಷ್ಕರ್ಮಿಗಳ ಗುಂಪು ಬರ್ಬರವಾಗಿ ಹತ್ಯೆ ಮಾಡಿತ್ತು. ಬುಧವಾರ ಬೆಳಗ್ಗೆ ನ್ಯಾಯಾಲಯದ ಸಭಾಂಗಣದಲ್ಲಿ ಸಭೆ ಸೇರಿದ ವಕೀಲರು ಈ ಘಟನೆಯನ್ನು ಖಂಡಿಸಿದರಲ್ಲದೆ ಇಂತಹ ಕೃತ್ಯಗಳು ಮರುಕಳಿಸಬಾರದೆಂದು, ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಿ.ಕೆ.ಅನಿಲ್, ಉಪಾಧ್ಯಕ್ಷ ಹರೀಶ್ ಬಾಬು, ಪ್ರಧಾನ ಕಾರ್ಯದರ್ಶಿ ಬಿ.ಆರ್.ದೇವರಾಜು, ಎನ್.ಆರ್.ಲೋಕೇಶ್, ಆರ್.ಪಾತಣ್ಣ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.