ಹಾವೇರಿ :
ತಾಲೂಕ ಪಂಚಾಯತಿ ವತಿಯಿಂದ ಆಯೋಜಿಸಿದ ವಿಶೇಷ ವಿಕಲಚೇತನರ ತಾಲೂಕ ಮಟ್ಟದ ತ್ರೈಸಿಕಲ್ (ಬೈಸಿಕಲ್) ಜಾಥಾದ ಮತದಾನದ ಜಾಗೃತಿ ಕಾರ್ಯಕ್ರಮದ ಬೈಕ್ ರ್ಯಾಲಿಗೆ ತಾ.ಪಂ ಮುಂಭಾಗ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಚಾಲನೆ ನೀಡಿದರು.
ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಿ ನಂತರ ಮಾತನಾಡಿದ ಅವರು ಪ್ರಜ್ಞಾವಂತ ಮತದಾರರು ಪ್ರಜಾ ಪ್ರಭುತ್ವದ ಮೂಲಭೂತ ಹಕ್ಕಾದ ಮತದಾನದಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ದೇಶದ ಅಭಿವೃದ್ದಿಗೆ ಕೈಜೋಡಿಸಬೇಕಿದೆ. ನಾವು ಸುತ್ತಮುತ್ತಲಿನವರು ಮತದಾನ ಮಾಡುವುದರ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವ ಕುರಿತು, ತಿಳಿ ಹೇಳುವ ಮೂಲಕ ಮತದಾನ ಮಾಡುವಂತೆ ಪ್ರೇರೆಪಿಸಬೇಕು ಎಂದರು. ತಾಲೂಕಾ ವ್ಯಾಪ್ತಿಯಲ್ಲಿ ಮತದಾನ ಶೇಕಡಾ ಪ್ರಮಾಣ ಹೆಚ್ಚಿಸುವಲ್ಲಿ ಕಾಳಜಿವಹಿಸಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕ ಸಿಬ್ಬಂದಿ ವರ್ಗದವರು,ಕಾರ್ಯಕರ್ತೆಯರು, ವಿಕಲಚೇತನರು ,ಸಾರ್ವಜನಿಕರು ಭಾಗವಹಿಸಿದ್ದರು.