ಮಂಡ್ಯ:
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಷ್ ಚುನಾವಣೆಯಲ್ಲಿ ಗೆದ್ದಾದ ಬಳಿಕ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ರಮೇಶ್ ಜಿಗಜಿಣಗಿ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಪಕ್ಷದ ಚುನಾವಣಾ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸುಮಲತಾ ಅವರಿಗೆ ಬೆಂಬಲ ನೀಡಿದ್ದು, ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೊಳ್ಳುವ ಕುರಿತು ಈಗಾಗಲೇ ಮಾತುಕತೆ ನಡೆದಿದೆ ಎಂದು ತಿಳಿಸಿದ್ದಾರೆ.
ತಮ್ಮ ನಿವಾಸದ ಮೇಲೆ ಐಟಿ ದಾಳಿ ನಡೆದಿರುವುದರ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಕೈವಾಡವಿದೆ ಎಂದು ಸಚಿವ ಸಿ.ಎಸ್. ಪುಟ್ಟರಾಜು ಆರೋಪಿಸಿದ್ದರೆ, ಈಗ ರಮೇಶ್ ಜಿಗಜಿಣಗಿ ಅವರ ಹೇಳಿಕೆಯಿಂದಾಗಿ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆಂಬ ವದಂತಿಗೆ ಪುಷ್ಟಿ ನೀಡಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ