ಕೋಲ್ಕತ್ತಾ:
ಮಮತ ಬ್ಯಾನರ್ಜಿ ಸರ್ಕಾರದ ವಿರುದ್ಧ ಮಾತನಾಡಿದ ರಾಹುಲ್ ಗಾಂಧಿ ಅವರಿಗೆ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಸಿಎಂ ಮಮತಾ ಬ್ಯಾನರ್ಜಿ ಅವರು ತಿರುಗೇಟು ನೀಡಿದ್ದಾರೆ.
ರಾಹುಲ್ ಗಾಂಧಿ ಇನ್ನು ಚಿಕ್ಕ ಮಗು ಇದ್ದಂತೆ ಅವರು ತಮಗೆ ತೋಚಿದ್ದನ್ನು ಹೇಳಿದ್ದಾರೆ. ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ . ಅವರ ಬಗ್ಗೆ ನಾನು ಏನು ಹೇಳಲು ಸಾಧ್ಯ ಎಂದು ಮರು ಪ್ರಶ್ನಿಸುವ ಮೂಲಕ ಮಮತಾ ಬ್ಯಾನರ್ಜಿ ಟಾಂಗ್ ನೀಡಿದ್ದಾರೆ.
ಮಾಲ್ಡಾದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ, ರಾಜ್ಯದ ಸಿಎಂ ಮಮತಾ ಬ್ಯಾನರ್ಜಿ ಅವರು ಯಾವುದೇ ಅಭಿವೃದ್ಧಿ ಮಾಡಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ.ಇದಲ್ಲದೆ ಬಂಗಾಳದ ಜನ ಎಡಪಕ್ಷಗಳ ಆಡಳಿತದಿಂದ ರೋಸಿ ಹೋಗಿದ್ದಾರೆ. ದೀದೀ ಅವರ ಆಡಳಿತದಲ್ಲೂ ಇದೇ ಮುಂದುವರಿದಿದ್ದು ದೌರ್ಜನ್ಯಗಳು ನಡೆಯುತ್ತಲೆ ಇವೆ ಎಂದು ಆರೋಪ ಮಾಡಿದ್ದರು.