ಹಾವೇರಿ
ಹಾವೇರಿ-ಗುತ್ತಲ ರಸ್ತೆಯಲ್ಲಿರುವ ರೈಲ್ವೆ ಅಂಡರ್ ಬ್ರಿಜ್ಡ್ ಕೆಳಗೆ ಮಾರ್ಚ್ 25 ರಂದು 45-50 ವರ್ಷದ ಅನಾಮಧೇಯ ಪುರುಷ ಶವ ಪತ್ತೆಯಾಗಿದೆ. ಯಾರೋ ದುಷ್ಕರ್ಮಿಗಳು ಆಯುಧದಿಂದ ತಲೆಗೆ ಬಲವಾಗಿ ಹೊಡೆದು ಮಾರಣಾಂತಿಕ ಹಲ್ಲೆನಡಿ ಕೊಲೆಮಾಡಿರುವ ಬಗ್ಗೆ ಕಂಡುಬಂದಿದೆ. ಈ ಕುರಿತು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಳ್ಳಲಾಗಿದೆ ಎಂದು ಶಹರ ಪೊಲೀಸ್ ಠಾಣೆ ಪೊಲೀಸ್ ಇನ್ಸಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
