ದೆಹಲಿ:
ಮಿಶನ್ ಶಕ್ತಿ (ಎ-ಸ್ಯಾಟ್) ಯಶಸ್ಸಿನ ಕುರಿತು ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ದೇಶವನ್ನು ಉದ್ದೇಶಿಸಿ ಬುಧವಾರ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಎಸ್ಯಾಟ್ ಪ್ರಯೋಗ ಯಶಸ್ವಿಯಾಗಿದೆ ಎಂದು ದೇಶದ ಎದುರು ಸಾರಿ ಹೇಳಿದ್ದರು.
ಚುನಾವಣೆ ಘೋಷಣೆಯಾದ ನಂತರ ಪ್ರಧಾನಿಯೇ ಹೀಗೆ ಮಾಧ್ಯಮಗಳ ಎದುರು ಬಂದು ಮಾಹಿತಿ ನೀಡಿದ್ದು ತಪ್ಪು. ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ವಿರೋಧ ಪಕ್ಷಗಳು ಹರಿಹಾಯ್ದಿದ್ದವು. ಈ ಹಿನ್ನೆಲೆಯಲ್ಲಿ ಸಂಭಾವ್ಯ ನೀತಿ ಸಂಹಿತೆ ಉಲ್ಲಂಘನೆ ಆರೋಪಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿತ್ತು.
ಉಪಗ್ರಹ ನಿರೋಧಕ ಕ್ಷಿಪಣಿ (ಎಸ್ಯಾಟ್) ಯಶಸ್ವಿ ಪ್ರಯೋಗ ‘ಮಿಷನ್ ಶಕ್ತಿ’ಯ ಮಾಹಿತಿಯನ್ನು ದೇಶಕ್ಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಚುನಾವಣಾ ಆಯೋಗವು ಶುಕ್ರವಾರ ಕ್ಲಿನ್ ಚಿಟ್ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ