ತುಮಕೂರು:
ತುಮಕೂರು ಲೋಕಸಭಾ ಕ್ಷೇತ್ರದಿಂದ ಕೈ ಬಂಡಾಯ ಅಭ್ಯರ್ಥಿಯಾಗಿದ್ದ ಮುದ್ದಹನುಮೇಗೌಡ ಅವರು ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದುಕೊಂಡಿದ್ದಾರೆ.
ಇಂದು ಮುದ್ದಹನುಮೇಗೌಡ ಪರವಾಗಿ ಚುನಾವಣಾ ಏಜಿಂಟರ್ ರಾಯಸಂದ್ರ ರವಿ ರವರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಹಿಂಪಡೆದಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿರುವ ಮುದ್ದಹನುಮೇಗೌಡ ಅವರು ಹೈಕಮಾಂಡ್ ನಿರ್ದೇಶನದಂತೆ ನಾಮಪತ್ರ ವಾಪಸ್ ಪಡೆದಿದ್ದೇನೆ. ಮೈತ್ರಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತೇನೆ ಅಂತ ಬೇಸರದಿಂದಲೇ ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಮುದ್ದಹನುಮೇಗೌಡರು ನಾಮಪತ್ರ ಹಿಂಪಡೆದ ಬಳಿಕ ಪಕ್ಷೇತರರಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದ ಮಾಜಿ ಶಾಸಕ ಕೆ.ಎನ್ ರಾಜಣ್ಣ ಕೂಡ ನಾಮಪತ್ರ ಹಿಂಪಡೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ