ಹರಪನಹಳ್ಳಿ :
ಇಲ್ಲಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಎಇಇ ಆಗಿ ಎಂ.ಜಯಪ್ಪ ಅಧಿಕಾರ ಸ್ವೀಕರಿಸಿದ್ದಾರೆ, ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಎಇಇ ಗಂಗಾಧರಪ್ಪ ಎಸಿಬಿ ಬಲೆಗೆ ಬಿದ್ದ ಹಿನ್ನೆಲೆಯಲ್ಲಿ ಸ್ಥಾನ ತೆರವಾಗಿತ್ತು. ಆಗಾಗಿ ಸರ್ಕಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಎಇಇ ಜಯಪ್ಪ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶಿಸಿದೆ.
ಅಧಿಕಾರ ಸ್ವೀಕಾರ ಬಳಿಕ ಜಯಪ್ಪ ಅವರು ಪತ್ರಿಕೆಯೊಂದಿಗೆ ಮಾತನಾಡಿ, ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಕೆಲಸ ಮಾಡುತ್ತೇನೆ. ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
