ದಾವಣಗೆರೆ:
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ವಿಪ್ ಕಾರ್ಯಕ್ರಮದ ಅಡಿಯಲ್ಲಿ ಶುಕ್ರವಾರ ನಗರದಲ್ಲಿ ಕಡ್ಡಾಯ ಮತದಾನ ಜಾಗೃತಿ ಜಾಥಾ ನಡೆಸಿದರು.ನಗರದ ಎಂ.ಸಿ.ಸಿ. ಎ ಬ್ಲಾಕ್ ಹಾಗೂ ಪಿ.ಜೆ. ಬಡಾವಣೆಯಲ್ಲಿ ಕಡ್ಡಾಯ ಮತದಾನದ ಬಗ್ಗೆ ಹಾಗೂ ಮತದಾನದ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಜಾಗೃತಿ ಜಾಥಾದಲ್ಲಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ಡಿ.ಎ.ಮೆಂಡಿಗೇರಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಎಸ್.ಡಿ.ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
