ತುಮಕೂರು: 
ಇಲ್ಲಿ ಪ್ರತಿಯೊಬ್ಬರೂ ಕಾವಲುದಾರರು, ಮೋದಿಯವರು ನಿಜವಾದ ಚೌಕಿದಾರ ಎಂದು ನಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ವಾಗ್ದಾಳಿ ನಡೆಸಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ನಾನು ಚೌಕಿದಾರ್ ಅಭಿಯಾನಕ್ಕೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ದೇಶವನ್ನ ಕಾಯುತ್ತಿರುವಾಗ ದೇಶದ ಜನರು ಕೂಡಾ ಚೌಕಿದಾರ್ ಅನ್ನುತ್ತಿದ್ದಾರೆ. ಇಲ್ಲಿ ಪ್ರತಿಯೊಬ್ಬರೂ ಕಾವಲುದಾರರು, ಮೋದಿಯವರು ನಿಜವಾದ ಚೌಕಿದಾರ ಎಂದಿದ್ದಾರೆ.

ಇದೀಗ ದೋಸ್ತಿಗಳಲ್ಲಿ ಕುರ್ಚಿಗಾಗಿ ಕಾದಾಟ ನಡೆಯುವುದನ್ನು ನೋಡುತ್ತಿದ್ದೇವೆ. ಮೈತ್ರಿ ಸರ್ಕಾರ ಬಂದಾಗಿನಿಂದಲೂ ನಾಯಕರು ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಗನ ಗೆಲುವಿಗಾಗಿ ಮಂಡ್ಯಕ್ಕೆ ಹೋಗುತ್ತಿದ್ದಾರೆ ಎಂದು ಮೈತ್ರಿ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








