ಕಾಬೂಲ್
ಅಫ್ಘಾನಿಸ್ತಾನದಲ್ಲಿ ಎರಡು ಪ್ರಾಂತ್ಯದ ಪೊಲೀಸ್ ಠಾಣೆಯ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ ಪರಿಣಾಮ ಸುಮಾರು 24 ಜನರು ಮೃತಪಟ್ಟಿದ್ದಾರೆ.
ಉನ್ನತ ಮೂಲಗಳ ಪ್ರಕಾರ, ಈ ಘಟನೆಯು ಗಜನಿ ನಗರದ ಹೊರ ಪ್ರದೇಶದಲ್ಲಿದ್ದ ಪೆÇಲೀಸ್ ಠಾಣೆ ಮೇಲೆ ತಾಲಿಬಾನಿ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಅದರಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ಸೇರಿ 9 ಅಧಿಕಾರಿಗಳು ಸಾವಿಗೀಡಾಗಿದ್ದು, 6 ಜನ ಸಿಬ್ಬಂದಿ ಗಾಯಗೊಂಡಿದ್ದಾರೆ.
ಅರ್ಗನ್ ಜಖಾವ್ ಜಿಲ್ಲೆಯಲ್ಲಿ ತಾಲಿಬಾನ್ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಭದ್ರತಾ ಸುರಕ್ಷತೆಯ ಐದು ಸೈನಿಕರು, ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎಂಟು ತಾಲಿಬಾನಿ ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ಹೊಂದಿದ್ದು, ಪೊಲೀಸ್ ಠಾಣೆಯ ಮೇಲೆ ಗ್ರೆನೆಡ್ ನಿಂದ ದಾಳಿ ಮಾಡಿದ್ದರು ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








