ಬೆಂಗಳೂರು:
ಐಟಿ ದಾಳಿ ದುರ್ಬಳಕೆ ಆರೋಪಿಸಿ ಕಾಂಗ್ರೆಸ್ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ .ಬಿ.ಎಲ್.ಶಂಕರ್, ಬ್ರಿಜೇಶ್ ಕಾಳಪ್ಪ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸೇರಿ ಇತರ ಮುಖಂಡರಿಂದ ಚುನಾವಣಾಧಿಕಾರಿಯನ್ನು ಭೇಟಿಯಾಗಿ ದೂರು ನೀಡಿದರು.
ಕೇಂದ್ರ ಸರ್ಕಾರ ಕೇಂದ್ರದ ಅಧೀನದಲ್ಲಿರೋ ಐಟಿಯಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ. ಐಟಿ ಅಧಿಕಾರಿ ಬಾಲಕೃಷ್ಣನ್ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮೇಲೆ ಐಟಿ ದಾಳಿ ಮಾಡೋ ಮೂಲಕ ಆತಂಕ ಸೃಷ್ಟಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರವು ಲೋಕಸಭಾ ಚುನಾವಣೆಯಲ್ಲಿ ಐ.ಟಿ.ಇಲಾಖೆ ಹಾಗೂ ಇನ್ನಿತರೆ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಐಟಿ ದಾಳಿ ಮಾಡೋ ಆತಂಕ ಇದೆ. ಈ ಮೂಲಕ ಚುನಾವಣಾ ಕೆಲಸ ಕಾರ್ಯಗಳಿಗೆ ಅಡ್ಡಿ ಮಾಡೋ ಪ್ರಯತ್ನ ನಡೆಯುತ್ತಿದೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆಗಾಗಿ ಇಂತಹ ದಾಳಿ ನಡೆಸದಂತೆ ನಿರ್ದೇಶಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮೂಲಕ ರಾಷ್ಟ್ರಪತಿ, ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆಗೆ ಮನವಿ ಮಾಡಿದ್ದಾರೆ.
ಬಳಿಕ ಮಾತನಾಡಿದ ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ, ಕಾಂಗ್ರೆಸ್-ಜೆಡಿಎಸ್ ಮುಖಂಡರ ಮೇಲಿನ ಐಟಿ ದಾಳಿ ಬಿಜೆಪಿ ಷಡ್ಯಂತ್ರ, ಬಿಜೆಪಿ ಮುಖಂಡರ ಮೇಲೆ ಐಟಿ ದಾಳಿ ಯಾಕೆ ನಡಿತಿಲ್ಲ ಅನ್ನೋದರ ಬಗ್ಗೆಯೂ ಆಯೋಗದ ಗಮನಕ್ಕೆ ತಂದಿದ್ದೇವೆ. ಚುನಾವಣಾ ಆಯೋಗ ಸೂಕ್ತ ಕ್ರಮದ ಭರವಸೆ ನೀಡಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ