ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ಭದ್ರತಾ ಪಡೆ ಇಂದು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್ – ಇ -ತಯ್ಬಾ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಸೋಮವಾರ ನಸುಕಿನ ಜಾವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಯು ಲಸ್ಸಿಪೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಉಗ್ರರು ಏಕಾಏಕಿ ಭದ್ರತಾಪಡೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾಪಡೆಯು ಪ್ರತಿದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
#UPDATE J&K Police: Three army personnel & one policeman sustained injuries. They have been hospitalized & in a stable condition. It was a clean operation, no collateral damage happened during the encounter. Arms & ammunition recovered from site of encounter. Case registered. https://t.co/Ycvg9GhwW5
— ANI (@ANI) April 1, 2019
ಮೃತಪಟ್ಟ ಉಗ್ರರಿಂದ ಎರಡು ಎಕೆ 47 ರೈಫಲ್ಸ್, 1 ಎಸ್ಎಲ್ಆರ್ ಮತ್ತು ಒಂದು ಪಿಸ್ತೂಲ್ ಸೇರಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇನ್ನೂ ಮೂವರು ಉಗ್ರರು ಈ ಭಾಗದಲ್ಲಿ ಅಡಗಿರುವ ಶಂಕೆಯನ್ನು ಸೇನಾ ಮೂಲಗಳು ವ್ಯಕ್ತಪಡಿಸಿವೆ. 55 ರಾಷ್ಟ್ರೀಯ ರೈಫಲ್ ದಳ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪಡೆ ಹಾಗೂ ಕೆಂದ್ರೀಯ ಮೀಸಲು ಪೊಲೀಸ್ ಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸುತ್ತಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/pulwama_encounter_759_10314.gif)