ಚಾಮರಾಜನಗರ :
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಫಾರ್ಚೂನರ್ ಕಾರನ್ನು ಚುನಾವಣಾಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅನುಮತಿ ಪಡೆಯದೆ ಪ್ರಚಾರಕ್ಕೆ ಬಳಕೆ ಮಾಡಿಕೊಂಡಿದ್ದ ಸಚಿವರ ಫಾರ್ಚೂನರ್ ಕಾರನ್ನು ಚುನಾವಣಾಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ.
ಸರ್ಕಾರಿ ಕಾರು ಬಳಸಲು ಅನುಮತಿ ಇಲ್ಲದೆ ಇರುವುದರಿಂದ ಅಧಿಕಾರಿಗಳ ತಂಡ ಸಚಿವರಿಗೆ ಅನೇಕ ಬಾರಿ ಎಚ್ಚರಿಕೆ ನೀಡಿದರೂ ನಿಯಮ ಉಲ್ಲಂಘನೆ ಮಾಡಿ ಸಂಚಾರ ಮಾಡುತ್ತಿದ್ದರು. ಕಾರು ಜಪ್ತಿ ಮಾಡಿದ್ದರಿಂದ ಬೆಂಬಲಿಗರ ಕಾರಲ್ಲಿ ಸಚಿವರು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
