ಹಿರಿಯೂರು :
ಈ ದೇಶದಲ್ಲಿ ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಹಾಗೂ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದರೆ ಈ ಸಲದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗದ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂಬುದಾಗಿ ರಾಜ್ಯ ಬಿಜೆಪಿ ಓಬಿಸಿ ಉಪಾಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್‍ರವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ಹಿರಿಯೂರು ನಗರದ ತುಳಸಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಬೂತ್‍ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ಕಾರ್ಯಕರ್ತರಲ್ಲಿ ಯಾವುದೇ ರೀತಿಯ ಅಸಮಾಧಾನಗಳಿದ್ದರೂ ಅವುಗಳನ್ನು ಚುನಾವಣೆಯ ನಂತರ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬಹುದು ಆದ್ದರಿಂದ ಪರಸ್ಪರ ಎಲ್ಲರೂ ಒಗ್ಗಟ್ಟಾಗಿ ಈ ಚುನಾವಣೆಯಲ್ಲಿ ಕೆಲಸ ಮಾಡುವ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ನರೇಂದ್ರಮೋದಿಯವರ ಕೈಬಲಪಡಿಸೋಣ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಕೆ.ದ್ಯಾಮೇಗೌಡರು, ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷರಾದ ಬಿ.ಆರ್.ಮಂಜುನಾಥ್, ನಗರಸಭೆ ಅಧ್ಯಕ್ಷರಾದ ಟಿ.ಮಂಜುಳ, ಮಾಜಿ ಅಧ್ಯಕ್ಷರಾದ ಟಿ.ಚಂದ್ರಶೇಖರ್, ಸದಸ್ಯರುಗಳಾದ ಚಿರಂಜೀವಿ, ತಿಮ್ಮರಾಜು, ಹಾಗೂ ಬಿಜೆಪಿ ಮುಖಂಡರುಗಳಾದ ಎಂ.ಎಸ್.ರಾಘವೇಂದ್ರ, ವೆಂಕಟೇಶ್, ಜಗದೀಶ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
