ಬೆಂಗಳೂರು:
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜಾತ್ಯತೀತ ಜನತಾ ದಳ ತನ್ನ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ಹೆಚ್.ಡಿ ರೇವಣ್ಣ, ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ಸೂರಜ್ ರೇವಣ್ಣ ಸೇರಿದಂತೆ ಚುನಾವಣಾ ಕಣದಲ್ಲಿ ಸ್ಪರ್ಧೆಗಿಳಿದಿರುವ ನಿಖಿಲ್, ಪ್ರಜ್ವಲ್ ಕೂಡ ಸ್ಟಾರ್ ಪ್ರಚಾರಕರಾಗಿದ್ದಾರೆ.
ಇನ್ನು ಬಿಡುಡೆಯಾಗಿರುವ ಪಟ್ಟಿಯಲ್ಲಿ ಯಾವುದೇ ಸಿನಿಮಾ ತಾರೆಯೂ ಈ ಪಟ್ಟಿಯಲ್ಲಿಲ್ಲದಿರುವುದು ಗಮನಾರ್ಹವಾಗಿದ್ದು, ಹಾಲಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಸೇರಿದಂತೆ 40 ಜನರ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಆಗಿದ್ದು, ಇವರು ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
