ಹುಳಿಯಾರು
ಅಂಗವಿಕಲ ಪ್ರಮಾಣ ಪತ್ರ ವಿತರಣೆಯಲ್ಲಿ ಅಧಿಕಾರಿಗಳು ವಿಳಂಬಧೋರಣೆ ಅನುಸರಿಸುತ್ತಿದ್ದಾರೆ ಎಂದು ಹುಳಿಯಾರಿನ ಸಾಮಾಜಿಕ ಕಾರ್ಯಕರ್ತ ಇಮ್ರಾಜ್ ಅವರು ಆರೋಪಿಸಿದ್ದಾರೆ.
ಹುಳಿಯಾರು ಪಟ್ಟಣದಲ್ಲಿ ಅನೇಕ ಮಂದಿ ಅಂಗವಿಕಲರು ಬುದ್ಧಿಹೀನರು ಇದ್ದಾರೆ. ಅಂಗವಿಕಲರ ಪ್ರಮಾಣಪತ್ರ ಪಡೆಯಲು ಹಲವಾರು ಬಾರಿ ಚಿಕ್ಕನಾಯಕನಹಳ್ಳಿಗೆ ಹೋಗಿದ್ದಾರೆ. ಆದರೆ ಈ ಮೂರು ತಿಂಗಳಿನಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಅಂಗವಿಕಲ ಪ್ರಮಾಣ ಪತ್ರ ಸೂಚಿಸುವ ಬುಕ್ಸ್ ನೀಡಿರುವುದಿಲ್ಲ ಎಂದು ದೂರಿದರು.
ಅಲ್ಲದೆ ಈ ರೀತಿಯ ಅಂಗವಿಕಲರಿಗೆ ಇತ್ತೀಚೆಗೆ ಆನ್‍ಲೈನ್ ಮುಖಾಂತರ ಅರ್ಜಿ ಸ್ವೀಕರಿಸುವ ಪದ್ಧತಿ ಜಾರಿಯಲ್ಲಿದ್ದು ಅನೇಕ ಅಂಗವಿಕಲರು, ಬುದ್ಧಿಹೀನರು ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದೂವರೆವಿಗೂ ಯಾವುದೇ ರೀತಿಯ ಪ್ರಕ್ರಿಯೆ ಮುಂದುವರಿಸಿಲ್ಲ. ಹಾಗಾಗಿ ಅಂಗವಿಕಲರಿಗೆ ಸ್ಮಾರ್ಟ್ ಕಾರ್ಡ್ ಸಿಗುತ್ತಿಲ್ಲ ಎಂದು ವಿವರಿಸಿದ್ದಾರೆ.
ಹೀಗಾಗಿ ನಾವು ಸ್ಥಳೀಯ ಗ್ರಾಮೀಣ ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ಮಹೇಶ್ ಅವರನ್ನು ಸಂಪರ್ಕಿಸಿದಾಗ ವೈದ್ಯರು ಆನ್‍ಲೈನ್ ಅರ್ಜಿಯನ್ನು ಸ್ವೀಕರಿಸುತ್ತಿಲ್ಲ. ಅದಕ್ಕೆ ವಿಲೇ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡುತ್ತಾರೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಖ್ಯಸ್ಥರು ಅಂಗವಿಕಲರಿಗೆ ಪ್ರಮಾಣ ಪತ್ರ ನೀಡಿ ಅವರಿಗೆ ಸರ್ಕಾರಿ ಸೌಲಭ್ಯ ಪಡೆಯಲು ಅವಕಾಶ ಮಾಡಿಕೊಡಬೇಕಾಗಿ ಕೇಳಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
