ಹಗರಿಬೊಮ್ಮನಹಳ್ಳಿ
ಬಳ್ಳಾರಿ ಜಿಲ್ಲೆಯ (ಗ್ರಾಮೀಣ) ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ಡಿ.ಎಂ.ಅಬ್ದುಲ್ಲಾರವರನ್ನು ನಾಮನಿರ್ದೇಶಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ನಾಗರಾಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಪತ್ರಿಕೆಯೊಂದಿಗೆ ಅವರು ಮಾತನಾಡಿ ಡಿ.ಎಂ.ಅಬ್ದುಲ್ಲಾರವರು ಇಂದಿನಿಂದಲೇ ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಈ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಿ ರಾಹುಲ್ ಗಾಂಧಿಯವರ ಕೈ ಬಲಪಡಿಸಬೇಕೆಂದು ಆದೇಶಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಡಿ.ಎಂ.ಅಬ್ದುಲ್ಲಾ ಮಾತನಾಡಿ ಬೂತ್ ಮಟ್ಟದಿಂದಲೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವ ಮೂಲಕ ಯುವಶಕ್ತಿಯನ್ನು ಹೆಚ್ಚಾಗಿ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ನಿಟ್ಟಿನತ್ತ ಇಂದಿನಿಂದಲೇ ಕಾರ್ಯಪ್ರವೃತ್ತನಾಗುತ್ತೇನೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
