ಮತದಾನ ರಥಕ್ಕೆ ಜಿಪಂ ಸಿಇಒ ನಿತೀಶ್ ಚಾಲನೆ

ಬಳ್ಳಾರಿ

           ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಹಾಗೂ ನೈತಿಕ ಮತದಾನಕ್ಕೆ ಒತ್ತು ನೀಡುವ ಹಾಗೂ ಕಡ್ಡಾಯ ಮತದಾನದ ಸಂದೇಶ ಸಾರುವ ‘ಮತದಾನ ರಥ’ಕ್ಕೆ ಜಿಪಂ ಸಿಇಒ ಕೆ.ನಿತೀಶ್ ಅವರು ಜಿಪಂ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.

         ಈ ಸಂದರ್ಭದಲ್ಲಿ ಮಾತನಾಡಿದ ಅವರು ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಅಮೂಲ್ಯ ಮತದಾನದ ಪ್ರಾಮುಖ್ಯತೆಯನ್ನು ಜನರಿಗೆ ತಿಳಿಯಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

          ಅದರಲ್ಲಿ ಇಡೀ ಜಿಲ್ಲೆಯಾದ್ಯಂತ ಸಂಚರಿಸಿ ತಪ್ಪದೇ ಮತದಾನ ಮಾಡಿ, ಆಮಿಷಗಳಿಗೆ ಮರುಳಾಗದಿರಿ, ಯೋಗ್ಯ ವ್ಯಕ್ತಿಗೆ ಮತಚಲಾಯಿಸಿ ಎಂಬುದು ಸೇರಿದಂತೆ ವಿವಿಧ ಸಂದೇಶಗಳನ್ನು ಒಳಗೊಂಡಿರುವ ಮತದಾನ ರಥವು ಕೂಡ ಒಂದಾಗಿದೆ ಎಂದರು.
ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಒಂದು ಮತದಾನ ರಥ ನೀಡಲಾಗಿದ್ದು, ಆ ರಥಗಳು ಕ್ಷೇತ್ರದಾದ್ಯಂತ ಸಂಚರಿಸಿ ಅರಿವು ಮೂಡಿಸಲಿವೆ ಎಂದರು.

         ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಳವಾಗಲಿದೆ ಎಂಬ ಸದಾಶಯವನ್ನು ಅವರು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಕೆ.ಆರ್.ನಂದಿನಿ, ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ್ ಗುಡಿ, ಚುನಾವಣಾ ವೆಚ್ಚ ವಿಭಾಗದ ನೋಡಲ್ ಅಧಿಕಾರಿ ಚನ್ನಪ್ಪ, ಬಿಸಿಎಂ ಅಧಿಕಾರಿ ಸುರೇಶ್ ಬಾಬು ಮತ್ತಿತರರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link