ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡರೇ ಸಿಧು??

ಅಮೃತಸರ:
 
        ಫೆ.14ರಂದು ಜೆ  ಇ ಎಮ್ ನ ಉಗ್ರ ದಾಳಿ ಕುರಿತಾಗಿ ನೀಡಿದ ಹೇಳಿಕೆಯಿಂದ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ ಹಾಗು ಪಂಜಾಬ್ ನ ಸಚಿವ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಡುವರೇ ಎಂಬ ಗಾಳಿಸುದ್ದಿ ಕೇಳಿಬರುತ್ತಿದೆ.
       ಚುನಾವಣೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಸಂದರ್ಭದಲ್ಲಿ ಎಲ್ಲ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿವೆ ಅದರಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಎಲ್ಲ ರಾಜಕೀಯ ಮುಖಂಡರು, ಸಚಿವರು, ಶಾಸಕರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರೆ ನವಜೋತ್ ಸಿಂಗ್ ಸಿಧು ಮಾತ್ರ ಪ್ರಚಾರ ಕಾರ್ಯದಿಂದ ದೂರ ಉಳಿದಿರುವುದು ಅಚ್ಚರಿ ಮೂಡಿಸಿದೆ.
        ಅಲ್ಲದೇ ಸಿಧು ಮೊಬೈಲ್ ಕೂಡ ನಾಟ್ ರೀಚೆಬಲ್ ಆಗಿದ್ದು, ಸಿಧು ಯಾರ ಕೈಗೂ ಸಿಗುತ್ತಿಲ್ಲ. ಹೀಗಾಗಿ ಸಿಧು ತಮ್ಮದೇ ನಾಯಕರ ವಿರುದ್ಧ ಮುನಿಸಿಕೊಂಡರೇ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದೇ ಕಾರಣಕ್ಕೆ ಸಿಧು ಪಕ್ಷದ ಪ್ರಚಾರ ಕಾರ್ಯದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.
ಸಿಧುಗೇಕೆ ಬಂತು ಈ ಮುನಿಸು ?
        ಪಕ್ಷ ಅವರನ್ನು ನಿರ್ಲಕ್ಷಿಸಿದ್ದೇ ಕಾರಣ ಎನ್ನಲಾಗುತ್ತಿದೆ. ಈ ಹಿಂದೆ ಬಿಜೆಪಿಯಲ್ಲಿ ಸಿಧು, ಅಮೃತಸರ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಗೆದ್ದ ಸಿಧು ಸಚಿವರೂ ಕೂಡ ಆಗಿದ್ದರು. ಬಳಿಕ ಪುಲ್ವಾಮ ಉಗ್ರ ದಾಳಿ ಸಂಬಂಧ ಪಾಕ್ ಪರ ಹೇಳಿಕೆ ನೀಡಿ ಆಕ್ರೋಶಕ್ಕೆ ತುತ್ತಾಗಿದ್ದರು. ಸಿಧು ವಿರುದ್ಧ ಅವರದೇ ಪಕ್ಷದ ಪ್ರಮುಖ ಮುಖಂಡ ಹಾಗೂ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕೂಡ ಕಿಡಿಕಾರಿದ್ದರು. ಇದರಿಂದ ಸಿಧು ಒತ್ತಡಕ್ಕೆ ಒಳಗಾಗಿದ್ದರು.
         ಲೋಕಸಭಾ ಚುನಾವಣೆಯಲ್ಲಿ ಪಕ್ಷ ತಮ್ಮ ಪತ್ನಿಗೆ ಟಿಕೆಟ್ ನೀಡಿಲ್ಲ ಎಂದು ಸಿಧು ಮುನಿಸಿಕೊಂಡಿದ್ದು, ಸಿಧು ಪತ್ನಿಗೆ ಚಂಡೀಘಡದಿಂದ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಪವನ್ ಬನ್ಸಾಲ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅಂತೆಯೇ ನವಜೋತ್ ಸಿಂಗ್ ಸಿಧು ಹೆಸರನ್ನು ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದಲೂ ಕೈ ಬಿಡಲಾಗಿದ್ದು, ಇದೇ ಕಾರಣಕ್ಕೆ ಸಿಧು ಪಕ್ಷದ ಪ್ರಚಾರ ಕಾರ್ಯದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap