ಬೆಳಗಾವಿ :
ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ ಘಟನೆ, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ರೇವಪ್ಪಾ ಕಲ್ಲೋಳಿ(35), ಹೆಂಡತಿ ರತ್ನವ್ವಾ ಕಲ್ಲೋಳಿ(30), ಮಗ ಸಚ್ಚೀನ್ (8), ರೇವಪ್ಪನ ಅಣ್ಣನ ಮಗ ಕೃಷ್ಣ ಮೃತ ದುರ್ದೈವಿಗಳಾಗಿದ್ದಾರೆ.
ನಿನ್ನೆ ಸಂಜೆ ಮಳಿಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಹೆಸ್ಕಾಂ ಅಧಿಕಾರಿಗಳಿಗೆ ತಂತಿ ತೆರವುಗೊಳಿಸುವಂತೆ ಮನವಿ ಮಾಡಿಕೊಂಡಿದ್ದರು ಕೂಡ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ಹೀಗಾಗಿ ಇಂದು ಬೆಳಗಿನ ಜಾವ ಕುಟುಂಬ ಸಮೇತ ಎರಡು ಎತ್ತಿನ ಜೊತೆ ಜಮೀನಿಗೆ ಹೋಗುತ್ತಿದ್ದ ದಂಪತಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದಾರೆ. ಅದರಲ್ಲಿ ವಿದ್ಯುತ್ ಹರಿಯುತ್ತಿದ್ದರಿಂದ ಎಲ್ಲರೂ ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ ಎತ್ತುಗಳಿಗೂ ವಿದ್ಯುತ್ ತಗುಲಿದೆ.
ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ