ಬೆಂಗಳೂರು
ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಸೋಲಿಸಲು ನಾಡಿನ ಪ್ರಗತಿಪರರು, ವಿಚಾರವಾದಿಗಳು ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಜಯನಗರದ ಖಾಸಗಿ ಹೋಟೆಲ್ ನಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ,ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ಸಾಹಿತಿಗಳಾದ .ಮರುಳಸಿದ್ದಪ್ಪ, ಎಸ್ ಜಿ. ಸಿದ್ದರಾಮಯ್ಯ, ಪೆÇ್ರ.ಬಿ.ಕೆ. ಚಂದ್ರಶೇಖರ್, ಡಾ.ಕೆ ಶರೀಫಾ, ಡಾ. ವಿಜಯಮ್ಮ, ಬಿ.ಟಿ.ಲಲಿತಾ ನಾಯ್ಕ್ ಸೇರಿದಂತೆ ಪ್ರಮುಖರು ಸಭೆ ನಡೆಸಿ, ಕೋಮುವಾದಿ ಶಕ್ತಿಗಳ ವಿರುದ್ಧ ಮತ ಚಲಾಯಿಸುವಂತೆ ಜನತೆಗೆ ಕರೆ ನೀಡಿದ್ದಾರೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂಪಾ, ಪ್ರಜಾಪ್ರಭುತ್ವದ ಉಳಿವಿಗಾಗಿ ಕೋಮುವಾದಿ ಶಕ್ತಿಗಳನ್ನು ದೂರ ಇಡಬೇಕು ಎಂದು ಹೇಳಿದರು.
ಮರುಳಸಿದ್ದಪ್ಪ ಅವರು ಮಾತನಾಡಿ, ಸೇನೆ ಎನ್ನುವುದು ದೇಶಕ್ಕೆ ಸಂಬಂಧ ಪಟ್ಟ ವಿಷಯ.ಆದರೆ, ಸೇನೆ ಅನ್ನು ರಾಜಕೀಯವಾಗಿ ಬಳಕೆ ಮಾಡಲಾಗುತ್ತಿದೆ.ಇನ್ನೂ, ಮೋದಿ, ಕೋಮುವಾದಿ ವಿರೋಧಿಗಳನ್ನು ದೇಶ ವಿರೋಧಿಪಟ್ಟ ಕಟ್ಟಲಾಗುತ್ತದೆ ಎಂದರು.
ಮುಂದಿನ ಬಾರಿ ನರೇಂದ್ರ ಮೋದಿ ಪ್ರಧಾನಿಯಾದರೆ, ಪ್ರತಿಪಕ್ಷಗಳು, ಟೀಕಾಕಾರರು ಉಸಿರಾಟುವುದು ಕಷ್ಟ.ಅಷ್ಟೇ ಅಲ್ಲದೆ, ಪ್ರಜಾಪ್ರಭುತ್ವ ನಾಶವಾಗಲಿದೆ. ಅದನ್ನು ಗಂಭೀರವಾಘಿ ಗಮನದಲ್ಲಿಟ್ಟುಕೊಂಡು ಮತದಾರರು ಈ ಬಾರಿ ಪ್ರಜ್ಞಾಪೂರ್ವಕ ವಾಗಿ ಮತ ಚಲಾಯಿಸಿ ಎಂದು ನುಡಿದರು.
ಬೆಂಗಳೂರು ದಕ್ಷಿಣದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಅವಿವೇಕಿ, ಮತಾಂಧನ ರೀತಿ ಮಾತನಾಡುತ್ತಾನೆ. ಮಹಿಳೆಯರ ಬಗ್ಗೆ ಯಾವ್ಯಾವ ಮಾತುಗಳನ್ನ ಆಡಿದ್ದಾರೆ ಎನ್ನುವುದು ನಮ್ಮ ಮುಂದೆ ಇದೆ.ಇಂತವರನ್ನು ಆಯ್ಕೆ ಮಾಡಿ ಲೋಕಸಭೆಗೆ ಕಳುಹಿಸಿದರೆ, ಏನಾಗುತ್ತದೆ ಯೋಚನೆ ಮಾಡಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ ಸಿದ್ದರಾಮಯ್ಯ ಟೀಕಿಸಿದರು.
ಡಾ.ಎಲ್.ಹನುಮಂತಯ್ಯ ಮಾತನಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಸರ್ಕಾರ ಬೇಕು. ಇನ್ನು ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ಸಂಪೂರ್ಣ ಸ್ವಾತಂತ್ರ್ಯ ಒದಗಿಸುವ ಸರ್ಕಾರ ನಮಗೆ ಬೇಕಾಗಿದೆ. ಹೀಗಾಗಿ, ಪ್ರತಿಯೊಂದು ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಜಾತ್ಯಾತೀತ ಪಕ್ಷಗಳಿಗೆ ಮತ ನೀಡುವಂತೆ ಹೇಳಿದರು.
ಬಿ.ಟಿ.ಲಲಿತಾ ನಾಯ್ಕ್ ಮಾತನಾಡಿ, ಕೆಲ ಮಾಧ್ಯಮಗಳು ಉದ್ದೇಶ ಪೂರಕವಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನೇ ಗುರಿಯಾಗಿಸಿಕೊಂಡು ಪ್ರಚಾರ ಮಾಡುತ್ತಿವೆ. ಆದರೆ, ಕೇಂದ್ರ ಸರ್ಕಾರದ ವೈಫಲ್ಯಗಳನ್ನು ತಿಳಿಸುವಲ್ಲಿ ವಿಫಲವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








