ಡಾ.ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಯಿಂದ ಪುಷ್ಪಾರ್ಚನೆ

ಹಾವೇರಿ
       : ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಿಗಜೀವನರಾಂ ಅವರ 112ನೇ ಜನ್ಮ ದಿನಾಚರಣೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು.
         ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಬಾಬುಜೀ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಪುಷ್ಪಾರ್ಚನೆ  ಮಾಡುವ ಮೂಲಕ ಗೌರವ ಸಲ್ಲಿಸಿದರು.
 
        ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀಮತಿ ಚೈತ್ರಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಬಾಬುಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
          ರಳ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಡಾ.ಬಾಬು ಜಗಜೀವನರಾಂ ಅವರ ಸಾಮಾಜಿಕ ನ್ಯಾಯದ ಬಗೆಗಿನ ಕಾರ್ಯಗಳು ಅನುಕರಣೀಯ. ಸಮಾಜದ ಒಳತಿಗಾಗಿ ಬದ್ಧತೆಯಿಂದ ಕೆಲಸಮಾಡಿದ್ದಾರೆ. ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿಗಳನ್ನು ಲೋಕಸಭಾ ಚುನಾವಣೆಯ ನೀತಿ ಸಂಹಿತೆಯ ಕಾರಣ ಸರಳವಾಗಿ ಆಚರಣೆ ಮಾಡಲಾಗುತ್ತಿದೆ.
 
            ಚುನಾವಣೆಯ ನಂತರ ಈ ಮಹಾನ್ ನಾಯಕರ ಚಿಂತನೆಗಳನ್ನು ಹಾಗೂ ಸಾಮಾಜಿಕ ಕೊಡುಗೆಗಳ ಕುರಿತಂತೆ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link