ದಾವಣಗೆರೆ
ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏ.05 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ರವರ 112ನೇ ಜಯಂತಿ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಮನ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಜಿ.ಪಂ. ಸಿಇಓ ಹೆಚ್.ಬಸವರಾಜೇಂದ್ರ, ನಾಗರೀಕ ಹಕ್ಕು ಜಾರಿ ಇಲಾಖೆಯ ಪೊಲೀಸ್ ಅಧೀಕ್ಷಕ ಸಿ.ಬಿ.ವೇದಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ಶಿವಾನಂದ್ ಕುಂಬಾರ್, ಇತರೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
