ಇಸ್ಲಮಾಬಾದ್:
ಪಾಕಿಸ್ತಾನ ಬಂಧಿಸಿರುವ ಭಾರತೀಯ ಮೀನುಗಾರರನ್ನು ಇದೇ ತಿಂಗಳು ಬಿಡುಗಡೆ ಮಾಡಲಾಗುವುದು ಎಂದು ಪಾಕ್ ವಿದೇಶಾಂಗ ಕಚೇರಿ ತಿಳಿಸಿದೆ.
ಅರೇಬ್ಬಿ ಸಮುದ್ರದಲ್ಲಿ ಪಾಕ್ ಜಲ ಗಡಿಯಲ್ಲಿ, ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು.
ಆದರೆ ಸದ್ಯ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಕ್ ವಿದೇಶಾಂಗ ಕಚೇರಿ ಭಾರತೀಯ ಕೈದಿಗಳನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಘೋಷಿಸಿದೆ.