ಲಕ್ನೋ
ಉತ್ತರ ಪ್ರದೇಶದ ಲಕ್ನೋ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಿರಿಯ ಬಿಜೆಪಿ ನಾಯಕ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಇದೇ 16 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಲಕ್ನೋದಿಂದ ಎರಡನೇ ಬಾರಿ ಕಣಕ್ಕಿಳಿಯಲಿರುವ ರಾಜನಾಥ್ ಸಿಂಗ್ ಅವರು ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ಹಲವು ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ
ಐದನೇ ಹಂತದಲ್ಲಿ ಲಕ್ನೋ ಲೋಕಸಭಾ ಚುನಾವಣೆ ನಡೆಯಲಿದ್ದು, ಮೇ 6 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇದೇ 10ರಿಂದ ಆರಂಭಗೊಳ್ಳಲಿದೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ರಾಜನಾಥ್ ಸಿಂಗ್ ಲಕ್ನೋ ಲೋಕಸಭಾ ಕ್ಷೇತ್ರದಿಂದ ಮೊದಲಬಾರಿಗೆ 2014ರಲ್ಲಿ ಸ್ಪರ್ಧಿಸಿ, ದಾಖಲೆಯ ಮತಗಳನ್ನು ಪಡೆದುಗೆಲುವು ಸಾಧಿಸಿದ್ದರು ಇದಕ್ಕೂ ಮುನ್ನ ಅವರು 2009ರಲ್ಲಿ ಘಾಜಿಯಾಬಾದ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.