ಏ.26ರಂದು ಸಾಮೂಹಿಕ ವಿವಾಹ ಮಹೋತ್ಸವ

ದಾವಣಗೆರೆ:

      ಬಹುಜನ ಸಮಾಜ ಸೇವಾ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತ್ಯೋತ್ಸವದ ಪ್ರಯುಕ್ತ ಏ.26ರಂದು ಸರಳ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಹೆಗ್ಗೆರೆ ರಂಗಪ್ಪ ತಿಳಿಸಿದರು.

         ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಶಿವಯೋಗಾಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಮುರುಘಾಮಠದ ಡಾ.ಶ್ರೀಶಿವಮೂರ್ತಿ ಮುರುಘಾ ಶರಣರು, ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ, ಕೋಡಿಹಳ್ಳಿ ಆದಿಜಾಂಭವ ಪೀಠದ ಶ್ರೀಷಡಾಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ, ಚಿತ್ರದುರ್ಗದ ಶ್ರೀಮಾದಾರ ಚನ್ನಯ್ಯ ಸ್ವಾಮೀಜಿ ಮತ್ತಿತರರು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.

        ಈ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 18 ರೊಳಗಾಗಿ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ:9972601168, 98441 10276 ಸಂಪರ್ಕಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಎಂ.ಆಂಜನೇಯ, ಟಿ.ರಂಗನಾಥ್, ಎಂ.ದುರುಗೇಶ್, ಹೆಚ್.ಗುರುರಾಜ್,ರಾಕೇಶ್, ಗುರುಪ್ರಸಾದ್ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link