ಬೆಂಗಳೂರು:
ರಾಹುಲ್ ಗಾಂಧಿ ಪ್ರಧಾನಿಯಾಗುವುದಾದರೆ ನಮ್ಮ ಅಭ್ಯಂತರವಿಲ್ಲ ಎನ್ನುತ್ತಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಈಗ ಪ್ರಧಾನಿ ಅಭ್ಯರ್ಥಿಯಾಗಿ ಮತ್ತೊಬ್ಬ ನಾಯಕನ ಹೆಸರು ಸೂಚಿಸಿದ್ದಾರೆ.
ವಿರೋಧ ಪಕ್ಷಗಳ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಪಟ್ಟಕ್ಕೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೆಸರನ್ನು ದೇವೇಗೌಡರು ಸೂಚಿಸಿದ್ದಾರೆ. ಅಲ್ಲದೆ, ತಾವು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ ಎಂದೂ ಹೇಳಿದ್ದಾರೆ.
‘ಮೋದಿಗೆ ಸವಾಲು ಎಸೆಯುವ ಸಮರ್ಥರು ಯಾರು ಎಂಬುದು ಸದ್ಯದ ಪ್ರಶ್ನೆ. ಚಂದ್ರಬಾಬು ನಾಯ್ಡುಗೆ ಮಾತ್ರ ಮೋದಿಗೆ ಎದುರು ಸವಾಲು ಹಾಕಿ ನಿಲ್ಲುವ ಸಾಮರ್ಥ್ಯವಿದೆ. ಹೀಗಾಗಿ ಅವರೇ ಏಕೆ ಪ್ರಧಾನಿ ಅಭ್ಯರ್ಥಿಯಾಗಬಾರದು?’ ಎಂದು ದೇವೇಗೌಡರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ