ಕೋಟೆನಾಡು ಚಿತ್ರದುರ್ಗದಲ್ಲಿಂದು ಮೋದಿ RALLY

ಚಿತ್ರದುರ್ಗ

         ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಅವರ ಚುನಾವಣಾ ರ್ಯಾಲಿಯನ್ನು ಯಶಸ್ವಿಗೊಳಿಸಲು ಪಕ್ಷದ ನಾಯಕರು ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದಾರೆ.

       ಮೋದಿಯವರ ಚುನಾವಣಾ ರ್ಯಾಲಿಗೆ ಚಿತ್ರದುರ್ಗ, ತುಮಕೂರು ಮತ್ತು ದಾವಣೆಗೆರೆಯಿಂದ ಭಾರೀ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿದೆ. ಬಿಜೆಪಿಯ ನಾಯಕರಾದ ಆರ್.ಅಶೋಕ್, ಗೋವಿಂದ ಕಾರಜೊಳ, ಕೋಟ ಶ್ರೀನಿವಾಸ ಪೂಜಾರಿ, ಮೂರು ಜಿಲ್ಲೆಗಳ ಅಭ್ಯರ್ಥಿಗಳು, ಶಾಸಕರುಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ

        ಮೋದಿ ಅವರ ಆಗಮನದ ಹಿನ್ನಲೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಎಸ್.ನವೀನ್ ಅವರು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಡಾ.ಶಿವಯೋಗಿಸ್ವಾಮಿ, ಚುನಾವಣಾ ಪ್ರಭಾರಿ ಜಿ.ಟಿ.ನರೇಂದ್ರನಾಥ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಹಾಗೂ ಸ್ಥಳೀಯ ಮುಖಂಡರುಗಳ ಜೊತೆ ಈಗಾಗಲೇ ಮೂರು-ನಾಲ್ಕು ಸಭೆ ನಡೆಸಿ ಅಗತ್ಯ ಸಿದ್ದತೆಗಳನ್ನು ಕೈಗೊಂಡಿದ್ದಾರೆ

        ರ್ಯಾಲಿಯಲ್ಲಿ ಯಾವುದೇ ಗೊಂದಲ, ಲೋಪವಾಗದಂತೆ ಎಚ್ಚರವಹಿಸಲಾಗಿದ್ದು, ಕೆಲವು ಹಿರಿಯ ನಾಯಕರಿಗೆ ವಿವಿಧ ಜವಾಬ್ದಾರಿಗಳನ್ನುವಹಿಸಲಾಗಿದೆ. ಹೊರಗಿನಿಂದ ಬರುವ ಪಕ್ಷದ ಹಿರಿಯ ನಾಯಕರು, ಶಾಸಕರುಗಳಿಗೆ ಆಸನದ ವ್ಯವಸ್ಥೆ ಕಲ್ಪಿಸಿಕೊಡುವುದು, ಮಹಿಳಾ ಕಾರ್ಯಕರ್ತರಿಗೆ, ಯುವ ಸಮೂಹಕ್ಕೆ, ಹಾಗೂ ಗಣ್ಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆಯನ್ನೂ ಮಾಡಲಾಗಿದೆ.

ಬೃಹತ್ ವೇದಿಕೆ ನಿರ್ಮಾಣ;

        ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಮೈದಾನದಲ್ಲಿ ರ್ಯಾಲಿ ನಡೆಯಲಿದ್ದು, ಮಂಗಳವಾರ ಮದ್ಯಾಹ್ನ 1 ಗಂಟೆ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.

       ಮೈದಾನದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಮುಖ್ಯ ವೇದಿಕೆಯ ಒಂದು ಭಾಗದಲ್ಲಿ ಪಕ್ಷದ ಪ್ರಮುಖ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಶಾಸಕರುಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ ಪೆಂಡಾಲ್‍ನಲ್ಲಿ 45 ರಿಂದ 50 ಸಾವಿರ ಕುರ್ಚಿಗಳನ್ನು ಹಾಕಲಾಗಿದ್ದು, ಎಲ್.ಇ.ಡಿ.ಪರದೆ ಮೂಲಕ ಮೋದಿರವರ ಭಾಷಣವನ್ನು ನೋಡುವ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಎಸ್.ನವೀನ್ ತಿಳಿಸಿದ್ದಾರೆ

ಪಾರ್ಕಿಂಗ್ ವ್ಯವಸ್ಥೆ;

       ತುಮಕೂರು ಕಡೆಯಿಂದ ಬರುವ ವಾಹನಗಳಿಗೆ ಐ.ಯು.ಡಿ.ಪಿ.ಲೇಔಟ್ ಸಮೀಪ ಪಾರ್ಕಿಂಗ್ ವ್ಯವಸ್ಥೆಯಿರುತ್ತದೆ, ಚಳ್ಳಕೆರೆಯಿಂದ ಬರುವ ವಾಹನಗಳಿಗೆ ಪಾಲಿಟೆಕ್ನಿಕ್ ಕಾಲೇಜು ಮುಂಭಾಗ, ದಾವಣಗೆರೆ, ಹೊಳಲ್ಕೆರೆ, ಹೊಸದುರ್ಗದ ಕಡೆಯಿಂದ ಬರುವ ವಾಹನಗಳಿಗೆ ತುರುವನೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮೈದಾನದಲ್ಲಿ ಪಾರ್ಕಿಂಗ್‍ಗೆ ಅನುಕೂಲ ಕಲ್ಪಿಸಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರು ರ್ಯಾಲಿಯಲ್ಲಿ ಕೆಲಸ ಮಾಡುವರು

ಬಿಗಿ ಪೊಲೀಸ್ ಬಂದೋಬಸ್ತ್

       ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಂದ್ರ ಪ್ರದೇಶವೂ ಸೇರಿದಂತೆ ವಿವಿಧ ಪ್ರದೇಶಗಳಿಂದ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ರ್ಯಾಲಿ ನಡೆಯುವ ಸುತ್ತಮುತ್ತಲಿನ ರಸ್ತೆ, ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಬೀಡುಬಿಟ್ಟಿದ್ದು, ಬಂದೋಬಸ್ತ್ ಕಾರ್ಯ ಚುರುಕುಗೊಳಿಸಲಾಗಿದೆ.

ರಸ್ತೆ ಸಂಚಾರ ನಿರ್ಬಂಧ

        ಚಿತ್ರದುರ್ಗ ನಗರಕ್ಕೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಮಾರ್ಗ ನಿರ್ಬಂಧ, ಬದಲಿ ಮಾರ್ಗಗಳು ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಜನತೆ ಸಹಕಾರ ನೀಡುವಂತೆ ಜಿಲ್ಲಾ ರ ಕ್ಷಣಾಧಿಕಾರಿ ಡಾ ಕೆ. ಅರುಣ್ ತಿಳಿಸಿದ್ದಾರೆ.

        ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಏ 9 ರಂದು ಪ್ರಧಾನ ಮಂತ್ರಿಗಳು ಕಾರ್ಯಕ್ರಮ ಇರುವುದರಿಂದ ಜನತೆ ಸೇರಿದಂತೆ ಗಣ್ಯರು ಭಾಗವಹಿಸುವ ಸಂಬಂಧ ಸಂಚರಿಸುವ ಮಾರ್ಗಗಳಲ್ಲಿ ಗಣ್ಯರ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಸಾರ್ವಜನಿಕರ ವಾಹನಗಳ ಸಂಚಾರ ಮತ್ತು ನಿಲುಗಡೆಯ ಮೇಲೆ ಈ ಕೆಳಕಂಡ ನಿರ್ಬಂಧಗಳನ್ನು ಮಾಡಲಾಗಿದೆ ಎಂದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link