ಬೆಂಗಳೂರು:
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿದರು.
ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಕೆ.ಜೆ. ಜಾರ್ಜ್ ಚುನಾವಣಾ ಪ್ರಚಾರದ ಬಗ್ಗೆ ದೇವೇಗೌಡರ ಚರ್ಚೆ ನಡೆಸಿದರು.ಜೆಡಿಎಸ್ ಪಾಲಿಗೆ ಬಂದಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಈ ಕ್ಷೇತ್ರದಿಂದ ಸಚಿವ ಕೃಷ್ಣಬೈರೇಗೌಡರನ್ನು ಕಣಕ್ಕಿಳಿಸಿದ್ದು, ಈಗಾಗಲೇ ಉಭಯ ಪಕ್ಷಗಳ ನಾಯಕರು ಜಂಟಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ದೇವೇಗೌಡರನ್ನು ಇದೇ ಸಂದರ್ಭದಲ್ಲಿ ಜಾರ್ಜ್ ಆಹ್ವಾನಿಸಿದರೆನ್ನಲಾಗಿದೆ. ಜೊತೆಗೆ ಇತ್ತೀಚಿನ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








