ಹರಪನಹಳ್ಳಿ
ತಾಲ್ಲೂಕಿನ ಹೊಸಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಗುಡಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಮನವಿ ಸಲ್ಲಿಸಿದ್ದಾರೆ.ಅಂರ್ತಜಲ ಕುಸಿತದಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುತ್ತಿರುವ ಕೊಳವೆ ಬಾವಿಗಳು ನೀರಿಲ್ಲದೇ ಬತ್ತಿ ಹೋಗುತ್ತಿವೆ.
ಜನ ಜಾನುವಾರುಗಳಿಗೆ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಗ್ರಾಮಕ್ಕೆ ಕೂಡಲೇ ನೀರು ಪೂರೈಸಲು ಕ್ರಮ ಜರುಗಿಸಬೇಕು ಎಂದು ಗ್ರಾಮಕ್ಕೆ ಅಭಿವೃದ್ಧಿ ಅಧಿಕಾರಿ ಉಮೇಶ ಅವರನ್ನು ಕರೆಸಿಕೊಂಡ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಪಂಚಾಯ್ತಿ ಅಧ್ಯಕ್ಷ ಸಣ್ಣ ಹನುಮಂತಪ್ಪ, ಗುಡಿಹಳ್ಳಿ ಹಾಲೇಶ್, ಎಸ್.ರಾಜಶೇಖರ, ಮಲ್ಲಿಕಾರ್ಜನು ಬಿ., ಶೇಖರ ಹಾಗೂ ಇತರರು ಭಾಗವಹಿಸಿದ್ದರು.