ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಿ

ಹೊನ್ನಾಳಿ:

        ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಕಾಂಗ್ರೆಸ್ ಪಕ್ಷ ಸಮರ್ಥವಾಗಿದೆ. ಆದ್ದರಿಂದ, ಕೇಂದ್ರದಲ್ಲಿ ಆಡಳಿತ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

       ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಸೋಮವಾರ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಎಚ್.ಬಿ. ಮಂಜಪ್ಪ ಪರ ಹಮ್ಮಿಕೊಂಡ ಪ್ರಚಾರ ಕಾರ್ಯದಲ್ಲಿ ಅವರು ಮಾತನಾಡಿದರು.

      ಬಿಜೆಪಿ ದೇಶದ ಜನರಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದೆ. ನರೇಂದ್ರಮೋದಿ ದೇಶದ ಯುವಕರನ್ನು ಮತಾಂಧರನ್ನಾಗಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಸಮಾಜದ ಎಲ್ಲಾ ಜನರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯುವ ನಾಯಕನ ಅಗತ್ಯತೆ ದೇಶಕ್ಕೆ ಇದೆ. ಅಂಥ ನಾಯಕನನ್ನು ಕಾಂಗ್ರೆಸ್ ಪಕ್ಷ ಹೊಂದಿದೆ ಎಂದು ತಿಳಿಸಿದರು.

       ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಇದನ್ನು ಆಧರಿಸಿ ಜನತೆ ಮೈತ್ರಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಎಚ್.ಬಿ. ಮಂಜಪ್ಪ ಅವರನ್ನು ಸಂಸತ್ತಿಗೆ ಕಳುಹಿಸಬೇಕು ಎಂದು ವಿನಂತಿಸಿದರು.ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಧುಗೌಡ ಮತ್ತಿತರರು ಮಾತನಾಡಿದರು.

       ಜಿಪಂ ಮಾಜಿ ಸದಸ್ಯ ಎಂ. ರಮೇಶ್, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಎ. ಉಮಾಪತಿ, ಮುಖಂಡರಾದ ಬಿ. ಸಿದ್ಧಪ್ಪ, ಡಾ.ಎಲ್. ಈಶ್ವರಾನಾಯ್ಕ, ಎಂ. ಸಿದ್ಧಪ್ಪ, ಎಚ್.ಬಿ. ಶಿವಯೋಗಿ, ನರಸಪ್ಪ, ಪಪಂ ಮಾಜಿ ಸದಸ್ಯ ಎಚ್.ಬಿ. ಅಣ್ಣಪ್ಪ, ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ. ವಾಸಪ್ಪ ಮತ್ತಿತರರು ಉಪಸ್ಥಿತರಿದ್ದರು.ತಾಲೂಕಿನ ಬೇಲಿಮಲ್ಲೂರು ಜಿಪಂ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಮತ್ತಿತರ ಮುಖಂಡರು ಎಚ್.ಬಿ. ಮಂಜಪ್ಪ ಪರ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿ, ಮತಯಾಚಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link