ಸಂವಿಧಾನ ವಿರೋಧಿಗಳಿಗೆ ಅಧಿಕಾರ ಕೊಡಬೇಡಿ

ಚಿತ್ರದುರ್ಗ;

       ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದ ಶಕ್ತಿಗಳಿಗೆ ಅಧಿಕಾರದಿಂದ ದೂರವಿಡಬೇಕು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ಜನರಲ್ಲಿ ಮನವಿ ಮಾಡಿದರು

       ಸಮೀಪದ ಮಾಳಪ್ಪನಹಟ್ಟಿಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ನಡವಳಿಕೆಯ ವಿರುದ್ದ ಕಿಡಿಕಾರಿದರು

      ಜನರಲ್ಲಿ ಸುಳ್ಳು ಭರವಸೆ ಹುಟ್ಟಿಸಿ ಅಧಿಕಾರ ನಡೆಸಿರುವ ಬಿಜೆಪಿ ಈ ಐದು ವರ್ಷದಲ್ಲಿ ಏನೂ ಮಾಡಿಲ್ಲ. ಬರೀ ಭಾಷಣ ಮಾಡಿಕೊಂಡು ಪ್ರಧಾನಿಗಳು ಕಾಲಾಹರಣ ಮಾಡಿದ್ದಾರೆ. ಈ ದೇಶವನ್ನು ಕಟ್ಟಿದ್ದು ಕಾಂಗ್ರೆಸ್ ಎನ್ನುವುದು ಎಲ್ಲರಿಗೂ ಗೊತ್ತಿದೆ. ಭಾರತದ ಕಡೆ ಇಂದು ಜಗತ್ತು ನೋಡುತ್ತಿದೆ ಅಂದರೆ ಅದು ಕಾಂಗ್ರೆಸ್ ಕಾರಣ ಎನ್ನುವುದನ್ನು ಜನರಿಗೆ ತಿಳಿ ಹೇಳಬೇಕಿದೆ ಎಂದು ಹೇಳಿದರು
ನಾವು ಈ ದೇಶವನ್ನು ಶೂನ್ಯದಿಂದ ಕಟ್ಟಿದ್ದೇವೆ. ಮಾಹಿತಿ ತಂತ್ರಜ್ಞಾನ, ಆರ್ಥಿಕ ವಲಯ, ಔದ್ಯೋಗಿಕ ವಲಯ, ಕೃಷಿ, ನೀರಾವರಿ, ಕೈಗಾರಿಕೆ, ಸಾರಿಗೆ, ವಿಜ್ಞಾನ ಹೀಗೆ ಎಲ್ಲಾ ರಂಗಗಳಲ್ಲಿಯೂ ಕಾಂಗ್ರೆಸ್ ಗಣನೀಯ ಸಾಧನೆ ಮಾಡಿದೆ. ಆದರೆ ಜನರನ್ನು ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೆಲ್ಲವನ್ನು ನಾವೇ ಮಾಡಿದ್ದು ಎಂದು ಹೊಸ ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದರು
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳ ಕಾಲ ಬಿಡುವಿಲ್ಲದೆ ಸುತ್ತಾಡಿದ್ದೇನೆ.

     ಜನರ ನೋವು, ನಲಿವುಗಳಿಗೆ ಸ್ಪಂದಿಸಿದ್ದೇನೆ. ರೈತರು, ಕೂಲಿ ಕಾರ್ಮಿಕರು, ಬಡವರು ಯಾರೇ ಬಂದರೂ ಅವರಿಗೆ ಆದ್ಯತೆ ನೀಡಿ ಕೆಲಸ ಮಾಡಿಕೊಟ್ಟಿದ್ದೇನೆ. ಜನರ ಪ್ರೀತಿ, ವಿಶ್ವಾಸ ಈ ಬಾರಿಯೂ ನನಗೆ ಸಿಗಲಿದೆ ಎಂದು ಬಿ.ಎನ್.ಚಂದ್ರಪ್ಪ ಹೇಳಿದರು
ಈ ಹಿಂದಿನ ಯಾವ ಸಂಸದರೂ ಮಾಡದಿರುವ ಕೆಲಸವನ್ನು ನಾನು ಮಾಡಿದ್ದೇನೆ. ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ದಿ ಕೆಲಸ ಮಾಡಲು ಮತ್ತೊಮ್ಮೆ ಅವಕಾಶ ನೀಡುವಂತೆಯೂ ಅವರು ಮನವಿ ಮಾಡಿದರು

       ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿದ ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ಕಾಂಗ್ರೆಸ್‍ಗೆ ದೊಡ್ಡ ಚರಿತ್ರೆ ಇದೆ. ಕಾಂಗ್ರೆಸ್ ಪಕ್ಷ ಕೇವಲ ಅಧಿಕಾರಕ್ಕಾಗಿ ಹುಟ್ಟಿದ ಪಕ್ಷವಲ್ಲ. ದಲಿತರು, ಶೋಷಿತರಿಗೆ, ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಕೊಟ್ಟ ಪಕ್ಷ ಇದಾಗಿದೆ ಎಂದು ಹೇಳಿದರು

      ಈ ಬಾರಿಯ ಚುನಾವಣೆಯಲ್ಲಿ ದೇಶದ ಜನರು ಸುಳ್ಳು ಹೇಳಿಕೊಂಡು ತಿರುಗಾಡಿದ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಐದು ವರ್ಷಗಳಲ್ಲಿ ಯಾವುದೇ ಸಾಧನೆ ಮಾಡಿಲ್ಲ. ಭ್ರಮೆ ಹುಟ್ಟಿಸಿದ್ದೇ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ಸಾಧನೆ ಎಂದು ವ್ಯಂಗ್ಯವಾಡಿದರು
ದೇಶದಲ್ಲಿ ಮತ್ತೆ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಎಲ್ಲಾ ಕಡೆಯೂ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡದಿದ್ದರೆ ಭವಿಷ್ಯದಲ್ಲಿ ನಾವು ಬಾರೀ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು

        ಬಿ.ಎನ್.ಚಂದ್ರಪ್ಪ ಅವರು ಜಿಲ್ಲೆಯಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ರಾತ್ರಿ ಹಗಲು ಅಭಿವೃದ್ದಿಗೆ ಶ್ರಮಿಸಿದ್ದಾರೆ. ಕ್ಷೇತ್ರದಲ್ಲಿ ಅವರ ಬಗ್ಗೆ ಉತ್ತಮ ಹೆಸರಿದೆ. ಈ ಬಾರಿಯೂ ಹೆಚ್ಚಿನ ಶಕ್ತಿ ತುಂಬಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು
ಮಾಜಿ ಶಾಸಕ ಎ.ವಿ.ಉಮಾಪತಿ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜು, ಜಾತ್ಯಾತೀತ ಜನತಾ ದಳದ ಜಿಲ್ಲಾಧ್ಯಕ್ಷ ಡಿ.ಯಶೋಧರ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಫಾತ್ಯರಾಜನ್, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಕೆಪಿಸಿಸಿ ಕಾರ್ಯದರ್ಶಿಗಳಾದ ಹನುಮಲಿ ಷನ್ಮುಖಪ್ಪ, ಎಂ.ಜಯಣ್ಣ, ಮುಖಂಡರಾದ ಬಿ.ಟಿ.ಜಗದೀಶ್,ಮಹಡಿ ಶಿವಮೂರ್ತಿ,ಶೇಷಣ್ಣ ಕುಮಾರ್, ಮೆಹಬೂಬ್ ಪಾಷ, ಜಿಲ್ಲಾ ಪಂಚಾಯಿತಿ ಸದಸ್ಯ ನರಸಿಂಹರಾಜು, ವಕೀಲ ಬಾಲಕೃಷ್ಣಯಾದವ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ, ಆರತಿಶಿವಮೂರ್ತಿ, ಇನ್ನಿತರರು ಸಭೆಯಲ್ಲಿ ಹಾಜರಿದ್ದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link