ಬೆಂಗಳೂರು:
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಇಂದು ಮುಂಜಾನೆ 6 ಗಂಟೆಯಿಂದಲೂ ಸುಮಾರು 100ಕ್ಕೂ ಹೆಚ್ಚು ಐಟಿ ಅಧಿಕಾರಿಗಳು 20 ಕಡೆಗಳಲ್ಲಿ ದಾಳಿ ನಡೆಸಿದ್ದು, ರಿಯಲ್ ಎಸ್ಟೇಟ್ ಉದ್ಯಮಿ ನಯಿಜ್ ಖಾನ್, ಅರಮನೆ ಮೈದಾನದಲ್ಲಿ ಹೂವಿನ ಅಲಂಕಾರ ಮಾಡುವ ಅಮಾನುಲ್ಲಾ ಖಾನ್ ಮತ್ತು ಕಮಲ್ ಪಾಷ ಅವರುಗಳ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿದ್ದಾರೆ. ಹಲವು ದಿನಗಳಿಂದ ಈ ಇಬ್ಬರ ವ್ಯವಹಾರದ ಮೇಲೆ ಐಟಿ ಅಧಿಕಾರಿಗಳು ಗಮನಿಸುತ್ತಿದ್ದರು ಎನ್ನಲಾಗಿದೆ.
ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ರಿಜ್ವಾನ್ ಅವರಿಗೆ ಶಾಕ್ ನೀಡಿದೆ. ಇನ್ನು ರಾಜ್ಯದಲ್ಲಿ ಐಟಿ ದಾಳಿ ಮುಂದುವರೆದಿದ್ದು, ಈ ಹಿಂದೆ ದೋಸ್ತಿ ಸರಕಾರದ ನಾಯಕರು ಐಟಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ