ಪ್ರಜ್ಞಾವಂತರಾಗಿ ಮತದಾನ ಮಾಡಿ :ಸತ್ಯಭಾಮ

ಚಿತ್ರದುರ್ಗ.

     ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಏ.18 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಪ್ರಜ್ಞಾವಂತರಾಗಿ ತಪ್ಪದೆ ಮತ ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮತಿ ಅಧ್ಯಕ್ಷೆ ಸಿ ಸತ್ಯಭಾಮ ಹೇಳಿದರು.

      ನಗರದಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ, ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಕಾರ್ಯಕ್ರಮದ ಅಡಿಯಲ್ಲಿ ತಾಲ್ಲೂಕು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ವರ್ಗದವರಿಂದ ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿ ಜಾಥಾಕ್ಕೆ ತಾ.ಪಂ. ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

      ಮತದಾರರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕುಗಳಲ್ಲಿ ಸ್ವೀಪ್ ಸಮಿತಿಯು ಮತದಾನದ ಜಾಗೃತಿ ಮೂಡಿಸುತ್ತಿದ್ದು. ಮತವನ್ನು ದುಡ್ಡು, ಕುಡಿತಕ್ಕೆ ಮಾರಿಕೊಳ್ಳಬೇಡಿ, ಮಾದಕ ವಸ್ತುಗಳ ಆಮಿಷಕ್ಕೆ ಮತದಾರರು ಒಳಗಾಗದೆ ಪ್ರಜ್ಞಾವಂತರಾಗಿ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾ, ತಾಲ್ಲೂಕು ಅಲ್ಲದೆ ಗ್ರಾಮೀಣ ಮಟ್ಟದಲ್ಲಿಯೂ ಮತದಾರರಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹೆಚ್ಚಿನದಾಗಿ ಜನರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಎಲ್ಲರೂ ಮುಂದಾಗಬೇಕು ಎಂದರು.

       ನಗರಸಭೆ ಪೌರಾಯುಕ್ತೆ ಲಕ್ಷ್ಮಿ ಮಾತನಾಡಿ ಮತದಾರರು ಹಣದ ಆಮಿಷಗಳಿಗೆ ಬಲಿಯಾಗಿ ಮತವನ್ನು ಮಾರಿಕೊಳ್ಳದೆ ಏ.18 ರಂದು ನಡೆಯುವ ಸಾರ್ವತ್ರಿಕ ಲೋಕಸಭೆ ಚುನಾವಣೆ ಅಂಗವಾಗಿ ಎಲ್ಲರು ತಪ್ಪದೆ ಮತದಾನ ಮಾಡಿ ಎಂದು ಹೇಳಿದರು.
ಬೈಕ್ ರ್ಯಾಲಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹಯ್ಯ, ತಾ.ಪಂ. ಸಹಾಯಕ ನಿರ್ದೇಶಕ ಹನುಮಂತಪ್ಪ ಹೆಚ್, ವ್ಯವಸ್ಥಾಪಕ ಹನುಮಂತರಾಯಪ್ಪ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ 38 ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.

       ಇದೇ ಸಂದರ್ಭದಲ್ಲಿ ಬೈಕ್ ರ್ಯಾಲಿಯು ತಾಲ್ಲೂಕು ಪಂಚಾಯತ್ ಆವರಣದಿಂದ ಮಹತ್ಮಾ ಗಾಂಧಿ ಸರ್ಕಲ್, ಸಂಗೊಳ್ಳಿ ರಾಯಣ್ಣ ವೃತ್ತ, ನೀಲಕಂಠೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆಯಿತು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap