ದಾವಣಗೆರೆ:
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತಿ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ವಾದಿ)ಯ ತಾಲೂಕು ಘಟಕದಿಂದ ಏ.28ರಂದು ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ 4ನೇ ವರ್ಷದ ಸರಳ ಸಾಮೂಹಿಕ ವಿವಾಹ ಮಹೋತ್ಸವ ಏರ್ಪಡಿಸಲಾಗಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಹೆಚ್.ಮಲ್ಲೇಶ್ ತಿಳಿಸಿದರು.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಬೂದಾಳ್ ರಸ್ತೆಯ ಎಸ್ಪಿಎಸ್ ನಗರದಲ್ಲಿ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಜಾಂಬವ ಮಠದ ಶ್ರೀಮಾರ್ಕಂಡೇಶ್ವರಮುನಿ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ. ದಲಿತಪರ ಸಂಘಟನೆಯ ಎಲ್ಲಾ ಮುಖಂಡರು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಶಾಲಾ ದಾಖಲಾತಿ, ನಿವಾಸ ದೃಢೀಕರಣ ಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಏ.25ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ:99451 27029, 97437 67844 ಸಂಪರ್ಕಿಸಬೇಕೆಂದು ಕೋರಿದರು.
ಸುದ್ದಿಗೋಷ್ಠಿಯಲ್ಲಿ ಡಿಎಸ್ಸೆಸ್ ಜಿಲ್ಲಾ ಸಂಚಾಲಕ ಡಿ.ಹನುಮಂತಪ್ಪ, ತಾಲೂಕು ಸಂಚಾಲಕ ಹೆಚ್.ಸಿ.ಮಲ್ಲಪ್ಪ, ಜಗಳೂರು ತಾಲೂಕು ಸಂಚಾಲಕ ಜಿ.ಎಸ್.ಲೋಕೇಶ್, ಹರಪನಹಳ್ಳಿ ತಾಲೂಕು ಸಂಚಾಲಕ ಅಂಜಿನಪ್ಪ ನೀಲಗುಂದ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








