ಕ್ವೆಟ್ಟಾ:
ಪಾಕಿಸ್ತಾನದ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ 16 ಜನ ಮೃತಪಟ್ಟು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ಬಾಂಬ್ ಸ್ಫೋಟದಿಂದ ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಾಂಬ್ ಸ್ಫೋಟದ ತೀವ್ರತೆಯಲ್ಲಿ ತರಕಾರಿ ಮಾರುಕಟ್ಟೆಯ ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೂ ಹಾನಿ ಉಂಟಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ