ಅಪ್ಪನಂತೆ ಸುಳ್ಳು ಹೇಳುವುದನ್ನು ಬಿಡಬೇಕು – ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ:

   ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ಸನ್ಯಾಸ ಪಡೆಯುತ್ತೇನೆ ಎಂದು ಸಚಿವ ರೇವಣ್ಣನ ಹೇಳಿಕೆಗೆಯ ಕುರಿತು ಶಾಸಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

  ಪ್ರಚಾರದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಈಗ ಅವರ ಮಗ ಹೆಚ್.ಡಿ. ರೇವಣ್ಣ ರಾಜಕೀಯ ಬಿಡುತ್ತೇನೆ ಎಂದು ಹೇಳಿದ್ದಾರೆ. ನಿಂಬೆಹಣ್ಣು ಹೆಚ್.ಡಿ. ರೇವಣ್ಣಂದು ಏನೂ ನಡೆಯುವುದಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

  ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ಸನ್ಯಾಸ ಪಡೆಯುತ್ತೇನೆ ಎಂದು ರೇವಣ್ಣ ಸುಳ್ಳು ಹೇಳುತ್ತಿದ್ದಾರೆ. ಇವರು ರಾಜಕೀಯ ಬಿಡುವುದು ಬೇಡ. ಅಪ್ಪನಂತೆ ಸುಳ್ಳು ಹೇಳುವುದನ್ನು ಸಚಿವ ರೇವಣ್ಣ ಬಿಡಬೇಕು ಎಂದು ಹೇಳಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ