ಮೈಸೂರು:
ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಮೈಸೂರಿನಲ್ಲಿ ಮಾತಿನ ಭರದಲ್ಲಿ ಬಿಜೆಪಿಗೆ ಮತ ನೀಡಿ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.
ಹೌದು, ನಗರದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ, ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಗೂ ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧೃವನಾರಾಯಣ್ ಅವರನ್ನು ಗೆಲ್ಲಿಸಿ ಎಂದು ಭಾಷಣ ನಡುವೆ ಬಾಯ್ತಪ್ಪಿ ಹೇಳಿದರು.
ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಚಾರ ಕೈಗೊಂಡಿದ್ದಾರೆ. ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ