
ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಹೈಕೋರ್ಟ್ ಹಸಿರು ನಿಶಾನೆ ನೀಡಿದೆ.
ಸಾಹಸಸಿಂಹ ಡಾ.ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆ ಈಗ ನಿವಾರಣೆಯಾಗಿದ್ದು, ಕೆಳ ನ್ಯಾಯಾಲಯ ಸ್ಮಾರಕ ನಿರ್ಮಾಣದ ಭೂ ಒಡೆತನಕ್ಕೆ ಸಂಬಂಧಿಸಿದಂತೆ ನೀಡಿದ್ದ ತಾತ್ಕಾಲಿಕ ಪ್ರತಿಬಂಧಕಾಜ್ಞೆ (ಸಿವಿಲ್ ಇಂಜೆಕ್ಷನ್) ಯನ್ನು ತೆರವುಗೊಳಿಸಿ ಕಾಮಗಾರಿ ಮುಂದುವರಿಸಲು ಸರಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಸ್ಮಾರಕ ನಿರ್ಮಾಣಕ್ಕೆ ಮೈಸೂರಿನ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣದ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿತ್ತು.
ನ್ಯಾ. ಜಿ. ನರೇಂದರ್ ಅವರಿದ್ದ ಏಕಸದಸ್ಯಪೀಠ, ”ಶುಕ್ರವಾರ ಅರ್ಜಿ ವಿಚಾರಣೆ ನಡೆಸಿ ಯಥಾಸ್ಥಿತಿ ಕಾಪಾಡುವಂತೆ ಈ ಹಿಂದೆ ನೀಡಿದ್ದ ಆದೇಶದ ಅವಧಿ ಮೀರಿರುವ ಕಾರಣ, ಸರಕಾರ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ಮುಂದುವರಿಸಬಹುದು,”ಎಂದು ಆದೇಶಿಸಿದೆ.
ಇದೀಗ ಹೈಕೋರ್ಟ್ ಆದೇಶದಂತೆ ವಿಷ್ಣು ಸ್ಮಾರಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಅಂತಿಮ ವಿಚಾರಣೆ ಮಾತ್ರ ಬಾಕಿ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
