ಹರಿಹರ:
ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ತಾಲ್ಲೂಕಿನ ಹಾಲಿವಾಣ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಎಚ್.ಬಿ.ಮಂಜಪ್ಪ ನವರ ಪರ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಶಾಸಕ ಎಸ್ ರಾಮಪ್ಪ ಬಿರುಸಿನ ಪ್ರಚಾರ ನಡೆಸಿದರು.
ಇಂದು ಬೆಳಗ್ಗೆಯಿಂದಲೇ ಪ್ರಚಾರ ಆರಂಭಿಸಿದ ಶಾಸಕರು ಬಿಸಿಲಿನ ಝಳವನ್ನು ಲೆಕ್ಕಿಸದೆ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರೊಂದಿಗೆ ಮನೆ ಮನೆಗಳಿಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.ನಂತರ ಗ್ರಾಮದ ಮುಖಂಡರುಗಳೊಂದಿಗೆ ಮಾತನಾಡಿದ ಶಾಸಕರು, ಜನರು ಬಿಜೆಪಿಯವರ ಮರುಳು ಮಾತಿಗೆ ಮರುಳಾಗದೆ ಕಳೆದ 70 ವರ್ಷಗಳಿಂದ ದೇಶದ ಅಭಿವೃದ್ಧಿ ಮತ್ತು ಸುಭದ್ರತೆಯನ್ನು ಕಾಪಾಡಿ ಕೊಂಡು ಬಂದಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಮೈತ್ರಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಮಾಡಲು ಸಹಕರಿಸ ಬೇಕೆಂದು ಹೇಳಿದರು.
ಈ ವೇಳೆ ಎಪಿಎಂಸಿ ಸದಸ್ಯ ಮಾಜಿ ಅಧ್ಯಕ್ಷ ಮಂಜುನಾಥ್ ಪಾಟೀಲ್,ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಜಿ.ಪರಮೇಶ್ವರಪ್ಪ ,ಎಸ್.ಬಿ. ಮಂಜುನಾಥ ಸಂತೋಷ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಎಲ್.ಬಿ.ಹನುಮಂತಪ್ಪ, ಅಭಿದಾಲಿ ಮತ್ತು ಗ್ರಾಮಾಂತರ ಪ್ರದೇಶದ ಅಸಂಖ್ಯಾತ ಮುಖಂಡರು ಅಭಿಮಾನಿಗಳು ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
