ಬೆಂಗಳೂರು
ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಫಲಿತಾಂಶವು ಸೋಮವಾರ ಪ್ರಕಟವಾಗಲಿದ್ದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಈ ಬಾರಿ ಸಿಇಟಿ ಪರೀಕ್ಷೆಗೂ ಮುನ್ನವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿರುವುದು ವಿಶೇಷ. ಬೆಳಗ್ಗೆ 11 ಗಂಟೆಗೆ ಪಿಯು ಮಂಡಳಿಯಲ್ಲಿಫಲಿತಾಂಶ ಪ್ರಕಟವಾಗಲಿದ್ದು ಮಧ್ಯಾಹ್ನ 12 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶ ದೊರೆಯಲಿದೆ,
ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಒಟ್ಟು 6.50 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಮಾರ್ಚ್ 1 ರಿಂದ ಮಾ.17ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.ಸದ್ಯ ಫಲಿತಾಂಶಕ್ಕೆ ಪಿಯುಸಿ ಬೋರ್ಡ್ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
