ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು …!

ಬೆಂಗಳೂರು

         ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಎಡಹಳ್ಳಿ ಬಳಿ ನಡೆದಿದೆ.

        ನೆಲಮಂಗಲದ ಡಿಕ್ಕಿವೀರಸಾಗರ ಗ್ರಾಮದ ವೀರಭದ್ರಯ್ಯ (60) ಮೃತ ದುರ್ದೈವಿ.ಗಂಭೀರವಾಗಿ ಗಾಯಗೊಂಡಿರುವ ಹಿಂಬದಿಯ ಸವಾರ ಲಕ್ಷ್ಮಯ್ಯರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

        ಬೈಕ್‍ಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ಬರುವಾಗ ಈ ಘಟನೆ ನಡೆದಿದ್ದು, ವೀರಭದ್ರಯ್ಯ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು .ನೆಲಮಂಗಲ ಬಳಿ ಬೈಕ್-ಕಾರು ಡಿಕ್ಕಿ ಹೊಡೆದ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ನಂತರ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನೆಲಮಂಗಲ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link