ಹಿರಿಯೂರು :
ಈ ಭವ್ಯ ಭಾರತದ ಸಂವಿಧಾನದ ಶಿಲ್ಪಿ ಎಂದರೆ ಡಾ.ಬಿ.ಆರ್.ಅಂಬೇಡ್ಕರ್‍ರವರು ಇಂತಹ ಮಹನೀಯರ ಪರಿಶ್ರಮದಿಂದ ನಮ್ಮೆಲ್ಲರಿಗೂ ಮತದಾನ ಹಕ್ಕು ಸಿಕ್ಕಿದೆ. ಜಾತಿ-ಲಿಂಗ ಭೇದಗಳ ತಾರತಾಮ್ಯವಿಲ್ಲದೆ ದೇಶದಲ್ಲಿ ಪುರುಷರಂತೆ ಹೆಣ್ಣಿಗೂ ಮತದಾನ ಹಕ್ಕು ನೀಡಿದ ಕೀರ್ತಿ ಸಂವಿಧಾನ ಶಿಲ್ಪಿ ಡಾ||ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂಬುದಾಗಿ ಡಾ.ಬಿ.ಆರ್.ಅಂಬೇಡ್ಕರ್ ಕಾಲೇಜಿನ ಪ್ರಾಂಶುಪಾಲ ಬಿ.ಪಿ.ತಿಪ್ಪೇಸ್ವಾಮಿ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಕಾಲೇಜು ಹಾಗೂ ಗೌತಮ್ ಅಕಾಡೆಮಿ ಶಾಲೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್‍ರವರು ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಂಬ ತ್ರಿವಳಿ ಸೂತ್ರಗಳಲ್ಲಿ ಶಿಕ್ಷಣವೆಂದರೆ ವಿಶ್ವವಿದ್ಯಾನಿಲಯಗಳು ನೀಡುವ ಸರ್ಟಿಪೀಕೇಟ್‍ಗಳಾಗದೇ, ವ್ಯಕ್ತಿಗಳು ನೈತಿಕಶಿಕ್ಷಣ ಪಡೆದಾಗ ಮಾತ್ರ ಈ ನಮ್ಮ ಸಮಾಜzಲ್ಲಿ ಬದಲಾವಣೆ ತರಲು ಸಾಧ್ಯ ಎಂದಿದ್ದರಲ್ಲದೆ ಈ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ತಮ್ಮ ಜೀವನ ಪೂರ್ತಿ ಹೋರಾಟ ನೆಡೆಸಿದ್ದರು ಎಂದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶಾಂತಮ್ಮತಿಪ್ಪೇಸ್ವಾಮಿ, ಉಪನ್ಯಾಸಕರಾದ ಕೆ.ರಂಗಪ್ಪ, ಈ.ನಾಗೇಂದ್ರಪ್ಪ, ಎಚ್.ಆರ್.ಲೋಕೇಶ್, ಶಾಂತಕುಮಾರ್, ಪ್ರಕಾಶ್, ಮಂಜು, ರಜಾಕ್‍ಸಾಬ್, ಮೆಹಬೂಬ್‍ಸಾಬ್, ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
