ಹುಬ್ಬಳ್ಳಿ:
ಜೆಡಿಎಸ್ ಕುಟುಂಬ ರಾಜಕಾರಣದ ಸಂಕೇತವೇ ಕಣ್ಣೀರಾಗಿದೆ. ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಮತ್ತು ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್ ಕಣ್ಣೀರಾಗಿದೆ. ಸಿಎಂ ಕುಮಾರಸ್ವಾಮಿ ಅವರು ಹತಾಶರಾಗಿದ್ದು, ಯಾವುದೇ ಕಾರಣಕ್ಕೂ ನಾನು ಕಣ್ಣೀರು ಹಾಕುವುದಿಲ್ಲ ಎಂದು ಹೇಳಿದ್ದರು. ಆದರೆ ಮತ್ತೆ ಸೋಮವಾರ ಹತಾಶರಾಗಿ ಕಣ್ಣೀರು ಹಾಕಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅಳುಮಂಜಿ ಅನ್ನೋದು ಮತ್ತೆ ಸಾಬೀತಾಗಿದೆ ಎಂದು ಕುಟುಕಿದ್ದಾರೆ.
ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಬಿಜೆಪಿ ಅಲೆಯಿದೆ. ಬಿಜೆಪಿ ಶಿಸ್ತುಬದ್ಧವಾಗಿ ಪ್ರಚಾರ ಮಾಡುತ್ತಿದೆ. ಕಣ್ಣೀರು ಸುರಿಸಿ ಅಧಿಕಾರ ಹಿಡಿಯಬೇಕು ಎಂದು ಹೊರಟಿರುವ ಜೆಡಿಎಸ್ ಕಾರ್ಯ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ