ಹಾಸನ ಮತ್ತು ಮಂಡ್ಯದಲ್ಲಿ ಮತ್ತೆ ಐಟಿ ದಾಳಿ..!!!

ಬೆಂಗಳೂರು

        ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗಲೇ ಆದಾಯ ಇಲಾಖೆಯ ಅಧಿಕಾರಿಗಳು ಮಂಡ್ಯ ಹಾಗೂ ಹಾಸನದಲ್ಲಿ ಇಂದು ಬೆಳಿಗ್ಗೆ ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ.

       ಹಾಸನದ ಹರದನಹಳ್ಳಿಯಲ್ಲಿ ಬೆಳಿಗ್ಗೆ 715ಕ್ಕೆ ಐಟಿ ಅಧಿಕಾರಿಗಳು ಸಚಿವ ರೇವಣ್ಣ ಆಪ್ತರ ಮನೆ ಮೇಲೆ ಮತ್ತೆ ಐಟಿ ದಾಳಿ ಮಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ತಮ್ಮನ ಮಗ ಪಾಪಣ್ಣಿ ಅವರ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಪಾಪಣ್ಣಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದಾರೆ. ಮೂರು ಇನ್ನೋವಾ ಕಾರಿನಲ್ಲಿ 15 ಜನರ ತಂಡ ಬಂದು ಪರಿಶೀಲನೆ ನಡೆಸುತ್ತಿದೆ.

       ಮಂಡ್ಯದಲ್ಲೂ ಬೆಳಗ್ಗೆ ಐಟಿ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಸದಸ್ಯ ಮತ್ತು ಸಚಿವ ಪುಟ್ಟರಾಜು ಅಪ್ತ ತಿಮ್ಮೇಗೌಡ ಎಂಬವರ ಪಾಂಡವಪುರ ಪಟ್ಟಣದಲ್ಲಿರುವ ಮನೆ, ಪೆಟ್ರೋಲ್ ಬಂಕ್, ಕಚೇರಿ ಮೂರು ಕಡೆ ದಾಳಿ ಮಾಡಿದ್ದಾರೆ.

       ಮಂಡ್ಯದ ಮದ್ದೂರಿನಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಸ್ವಾಮಿ ಅವರ ಪತಿ ಶ್ರೀನಿಧಿ ಪ್ರತಿಷ್ಠಾನದ ಅಧ್ಯಕ್ಷ ಎಸ್‍ಪಿ ಸ್ವಾಮಿ ಅವರು ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗೆಸ್ಟ್ ಹೌಸ್‍ನಲ್ಲಿ ತಂಗಿದ್ದರು. ಇಂದು ಬೆಳಗಿನ ಜಾವ ಸುಮಾರು 5.30 ಸಮಯದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

      ಮಂಡ್ಯ ಹಾಗೂ ಹಾಸನದಲ್ಲಿ ಚುನಾವಣೆಗೆ ಕೋಟ್ಯಾಂತರ ರೂಗಳನ್ನು ಖರ್ಚು ಮಾಡಲಾಗುತ್ತಿದೆ ಎನ್ನುವ ಮಾಹಿತಿ ಆಧರಿಸಿ ಜೆಡಿಎಸ್ ನಾಯಕರು ಮತ್ತು ಅವರ ಅಪ್ತರ ಮನೆ ಕಚೇರಿಗಳ ಮೇಲೆ ಆದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಶೇಖರಿಸಿರುವ ಹಣ ಚಿನ್ನಾಭರಣ ಇನ್ನಿತ ಬೆಲೆಬಾಳುವ ವಸ್ತುಗಳಿಗೆ ತೀವ್ರ ಶೋಧ ನಡೆಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link