ದೆಹಲಿ:
ಜನಪ್ರಿಯ ವಿಡಿಯೋ ಶೇರಿಂಗ್ ಅಪ್ಲಿಕೇಶನ್ ‘ಟಿಕ್ ಟಾಕ್’ ಅನ್ನು ಆಪ್‍ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿ ಎಂದು ಗೂಗಲ್ ಮತ್ತು ಆಪಲ್ ಕಂಪನಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೂಚನೆ ನೀಡಿದೆ.
ಟಿಕ್-ಟಾಕ್‌ನಿಂದ ಅಶ್ಲೀಷ ವಿಡಿಯೋಗಳು ಹೆಚ್ಚಾಗುತ್ತಿವೆ, ಮತ್ತು ಅದರಿಂದ ಲಿಂಗ ದಾಳಿಗಳು ಹೆಚ್ಚಾಗುತ್ತಿವೆ, ಯುಕವರಿಗೆ ಟಿಕ್-ಟಾಕ್ ಆಪ್ ಗೀಳಾಗಿ ಪರಿಣಮಿಸಿದೆ ಎಂದು ಮದ್ರಾಸ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಟಿಕ್-ಟಾಕ್ ಅನ್ನು ಬ್ಯಾನ್ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್ ಕೆಲವು ದಿನಗಳ ಹಿಂದಷ್ಟೆ ಸರ್ಕಾರಕ್ಕೆ ಸೂಚಿಸಿತ್ತು. ಇದನ್ನು ಕೆಲವರು ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು, ಆದರೆ ಸುಪ್ರಿಂ ತಡೆ ನೀಡಲು ನಿರಾಕರಿಸಿತ್ತು.
ಸುಪ್ರೀಂ ಕೋರ್ಟ್ ಮದ್ರಾಸ್ ಹೈ ಕೋರ್ಟ್ ಆದೇಶಕ್ಕೆ ತಡೆ ನೀಡದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಆ್ಯಪನ್ನು ಕಿತ್ತು ಹಾಕುವಂತೆ ಆಪಲ್ ಮತ್ತು ಗೂಗಲ್ ಕಂಪನಿಗಳಿಗೆ ಸೂಚಿಸಿದೆ. ಕೇಂದ್ರದ ಸೂಚನೆಯ ಹಿನ್ನೆಲೆಯಲ್ಲಿ ಗೂಗಲ್ ಮತ್ತು ಆಪಲ್ ಕಂಪನಿ ಆ್ಯಪ್ ಸ್ಟೋರ್ ನಿಂದ ಟಿಕ್ ಟಾಕ್ ಕಿತ್ತು ಹಾಕಿದೆ.
ಇನ್ನು ಮುಂದೆ ಟಿಕ್-ಟಾಕ್ ಅನ್ನು ಭಾರತದಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ, ಆದರೆ ಈಗಾಗಲೇ ಟಿಕ್-ಟಾಕ್ ಹೊಂದಿರುವವರು ಅಪ್ಲಿಕೇಶನ್ ಅನ್ನು ಸದ್ಯದ ಮಟ್ಟಿಗೆ ಎಂದಿನಿಂತೆ ಬಳಸಬಹುದಾಗಿದೆ. ಮುಂದೆ ಅದನ್ನೂ ಬಂದ್ ಮಾಡುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ