ಮತದಾನ ಜಾಗೃತಿಗಾಗಿ ಕವಿತೆ ಬರೆದು ಕೊಡಿ

ದಾವಣಗೆರೆ:

      ಕವಿಗಳು ಮತದಾನ ಜಾಗೃತಿಗೆ ಸಂಬಂಧಿಸಿದಂತೆ ಕವನ ಬರೆದು ಕೊಟ್ಟರೆ, ಉತ್ತಮ ಕವಿತೆ ಆಯ್ಕೆ ಮಾಡಿಕೊಂಡು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿ ಕೊಡುವುದಾಗಿ ಜಿಲ್ಲಾ ಪಂಚಾಯತ್ ಸಿಇಒ ಹೆಚ್.ಬಸವರಾಜೇಂದ್ರ ತಿಳಿಸಿದರು.

       ನಗರದ ಡಯಟ್ ಸಭಾಂಗಣದಲ್ಲಿ ತಾಲೂಕು ಕಸಾಪ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ಕಲಾಕುಂಚದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಜಿಲ್ಲಾ ಮಟ್ಟದ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕವಿಗಳು, ಬರಹಗಾರರು ಮತದಾನ ಜಾಗೃತಿಗೆ ಸಂಬಂಧಪಟ್ಟ ಕವನ ರಚಿಸಿ ಕೊಟ್ಟರೆ, ಅದರಲ್ಲಿ ಉತ್ತಮವಾದ ಕವಿತೆಯನ್ನು ಆಯ್ಕೆ ಮಾಡಿ, ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿ, ರಾಷ್ಟ್ರಮಟ್ಟದಲ್ಲಿ ಆ ಕವನ ಪ್ರಕಟವಾಗುವಂತೆ ಕ್ರಮ ವಹಿಸಲಾಗುವುದು ಎಂದರು.

       ಮತದಾನ ಜಾಗೃತಿ ಮೂಡಿಸಲು ಪಥ ಸಂಚಲನ, ಕಾರ್ ರ್ಯಾಲಿ, ವಾಕ್‍ಥಾನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ವೀಪ್ ಕಾರ್ಯಕ್ರಮದಡಿ ಕವಿಗಳಿಂದ ಕವನ ವಾಚನದ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವುದು ವಿಶೇಷವಾಗಿದೆ. ಕವಿತೆಗಳ ಮೂಲಕ ಮತದಾರರಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬಹುದು ಎಂದರು.ಏ.23ರಂದು ಮತದಾನದ ದಿನ ಯಾರೂ ಸಹ ನಿದ್ದೆ ಮಾಡದೇ, ಮತಚಲಾಯಿಸಬೇಕು. ಪ್ರತಿಯೊಬ್ಬರೂ ಮತದಾನ ಮಾಡಲು ಕವಿಗಳು ತಮ್ಮ ಕವನಗಳ ಮೂಲಕ ಸ್ಪೂರ್ತಿಯನ್ನು ತುಂಬಬೇಕೆಂದು ಸಲಹೆ ನೀಡಿದರು.

       ಪ್ರಾಸ್ತಾವಿಕ ಮಾತನಾಡಿದ ತಾಲೂಕು ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಭಾರತವು ವಿಶ್ವದಲ್ಲಿಯೇ ಅತ್ಯಂತ ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ರಾಷ್ಟ್ರವಾಗಿದೆ. ಪ್ರಜೆಗಳಿಂದ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಎಂಬ ವ್ಯವಸ್ಥೆ ಭಾರತದಲ್ಲಿ ಮಾತ್ರ ಇದ್ದು, ಪ್ರಜಾ ನಾಯಕನನ್ನು ಆಯ್ಕೆ ಮಾಡಿಕೊಂಡು ನಮ್ಮನ್ನು ನಾವು ಆಳುವಂತಹ ಪ್ರಜಾಪ್ರಭುತ್ವ ರೂಪಿಸಿಕೊಳ್ಳಲು ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದರು.

       ಡಯಟ್‍ನ ಉಪನಿರ್ದೇಶಕ ಹೆಚ್.ಕೆ.ಲಿಂಗರಾಜ್ ಅಧ್ಯಕ್ಷತೆ ವಹಿಸಿದ್ದರು. ಕಲಾಕುಂಚದ ಸಾಂಸ್ಕøತಿಕ ಸಂಸ್ಥೆ ಅಧ್ಯಕ್ಷ ಕೆ.ಹೆಚ್.ಮಂಜುನಾಥ್, ಚನ್ನಗಿರಿ ತಾಲೂಕು ಸಂತೇಬೆನ್ನೂರು ಕಸಾಪ ಮಾಜಿ ಅಧ್ಯಕ್ಷ ಕೆ.ಸಿದ್ದಲಿಂಗಪ್ಪ, ಎಸ್.ಎಂ.ಮಲ್ಲಮ್ಮ, ಶಾಂತಾಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕಲಾಕುಂಚ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶಣೈ ನಿರೂಪಿಸಿದರು. ಡಾ.ಸಿ.ಕೆ.ಆನಂದ ತೀರ್ಥಾಚಾರ್ ಸ್ವಾಗತಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link