ಬೆಂಗಳೂರು
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವಿಜಿನಾಪುರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ. ಸೈಯದ್ ಇಮ್ರಾನ್ ಎಂಬ ಬಿಜೆಪಿ ಕಾರ್ಯಕರ್ತ ನಿಗೆ ಕಾಂಗ್ರೆಸ್ ಕಾರ್ಯಕರ್ತರು ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿದ್ದು, ಬಿಜೆಪಿ ಕಾರ್ಯಕರ್ತರು ನಹೀಂ ಎಂಬ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಬಲವಾಗಿ ಹೊಡೆದಿದ್ದಾರೆ.
ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಮಾರಾಮಾರಿಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ